ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೌಟುಂಬಿಕ ಕಲಹ: ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು

ನಾಗಮಂಗಲ ತಾಲೂಕಿನ ಮಾರದೇವನಹಳ್ಳಿಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ...

ಆತ್ಮಹತ್ಯೆ
Vishwanath S
Updated On : 23 Feb 2016, 6:58 am

ಮಂಡ್ಯ: ನಾಗಮಂಗಲ ತಾಲೂಕಿನ ಮಾರದೇವನಹಳ್ಳಿಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದವರನ್ನು ಮಾರದೇವನಹಳ್ಳಿಯ ದಿವಂಗತ ರಾಮೇಗೌಡರ ಪತ್ನಿ ಮೀನಾಕ್ಷಮ್ಮ (55), ಪುತ್ರಿಯರಾದ ಯೋಗಶ್ರೀ (20), ಪದ್ಮಶ್ರೀ (22), ಸುಚಿತ್ರಾ (26), ಮತ್ತು ಪುತ್ರ ಯೋಗಾನಂದಗೌಡ (16) ಎಂದು ಗುರುತಿಸಲಾಗಿದೆ.

3 ತಿಂಗಳ ಹಿಂದಷ್ಟೇ ಬೆಳ್ಳೂರು ಕ್ರಾಸ್ ಬಳಿ ಮೀನಾಕ್ಷಮ್ಮನವರ ಪತಿ ರಾಮೇಗೌಡ ಅವರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈ ದಂಪತಿಗೆ ಮೂವರು ಹೆಣ್ಣುಮಕ್ಕಳು, ಓರ್ವ ಗಂಡು ಮಗ ಇದ್ದರು. 2 ವರ್ಷಗಳ ಹಿಂದೆ ಹಿರಿಯ ಮಗಳು ಸುಚಿತ್ರಾಳನ್ನು ತುಮಕೂರಿನ ಯುವಕನಿಗೆ ಕೊಟ್ಟು ವಿವಾಹ ಮಾಡಿಕೊಡಲಾಗಿತ್ತು. ಆದರೆ ಆಕೆಗೆ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದು, ಈ ಸಂಬಂಧ ಮೀನಾಕ್ಷಮ್ಮ ತಲೆ ಕೆಡಿಸಿಕೊಂಡಿದ್ದರು ಎನ್ನಲಾಗಿದೆ.

ಇಂದು ಬೆಳಗ್ಗೆ ಎಷ್ಟು ಸಮಯವಾದರೂ ಮನೆಯವರಾರೂ ಬಾಗಿಲು ತೆಗೆಯದ ಕಾರಣ ಅಕ್ಕಪಕ್ಕದ ಮನೆಯವರು ಮನೆ ಬಳಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಡಿವೈಎಸ್‌‌‌ಪಿ, ಹಿರಿಯ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.  ಈ ಸಂಬಂಧ ದೂರು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments