ರೈತರ ಸಾಲಮನ್ನಾ ಸಾಧ್ಯವಿಲ್ಲ: ಸಿದ್ದರಾಮಯ್ಯ
ರೈತರ ಸಾಲ ಮನ್ನಾ ಮಾಡುವುದು ಆರ್ಥಿಕ ಪರಿಸ್ಥಿತಿಯಲ್ಲಿ ಅಸಾಧ್ಯ. ಸಾಲ ವಸೂಲು ಮಾಡದಂತೆ ಬ್ಯಾಂಕ್ಗಳಿಗೆ ತಾಕೀತು ಮಾಡಲಾಗಿದೆ. ಸುಸ್ತಿ ಬಡ್ಡಿ ಮನ್ನಾ ಮಾಡಿದ್ದು...
ಬೆಂಗಳೂರು: ರೈತರ ಸಾಲ ಮನ್ನಾ ಮಾಡುವುದು ಆರ್ಥಿಕ ಪರಿಸ್ಥಿತಿಯಲ್ಲಿ ಅಸಾಧ್ಯ. ಸಾಲ ವಸೂಲು ಮಾಡದಂತೆ ಬ್ಯಾಂಕ್ಗಳಿಗೆ ತಾಕೀತು ಮಾಡಲಾಗಿದೆ. ಸುಸ್ತಿ ಬಡ್ಡಿ ಮನ್ನಾ ಮಾಡಿದ್ದು, ಈ ವರ್ಷ ಬರಗಾಲ ಇರುವುದರಿಂದ ಬಡ್ಡಿ ಪಾವತಿಗೆ ಕಾಲಾವಕಾಶ ನೀಡಲಾಗಿದೆ
ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬಜೆಟ್ ಮಂಡನೆಗೆ ಮುನ್ನ ರೈತ ಸಂಘಟನೆಗಳು, ರೈತ ಮುಖಂಡರ ಜತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾಲೋಚನೆ ಸಭೆಯಲ್ಲಿ ರೈತ ಪ್ರತಿನಿಧಿಗಳು ಮಾಡಿದ ಮನವಿಗೆ ಸಿಎಂ ಈ ರೀತಿ ಪ್ರತಿಕ್ರಿಯಿಸಿದರು.
ರೈತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಹೇಳಲಾರೆ. ಆದ್ಯತೆ ಮೇರೆಗೆ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಸರಕಾರ ಶ್ರಮಿಸಿದೆ. ಈ ಬಾರಿಯ ಬಜೆಟ್ನಲ್ಲಿ ರೈತರಿಗೆ ಅನುಕೂಲಕಾರಿ ಯೋಜನೆಗಳ ಅನುಷ್ಠಾನ ಮಾಡಲು, ರೈತರಲ್ಲಿ ವಿಶ್ವಾಸ ಮೂಡಿಸಲು ಯೋಜನೆಗಳನ್ನು ರೂಪಿಸಲು ಸಲಹೆ ನೀಡಿ ಎಂದು ಮನವಿ ಮಾಡಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.