ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ತುಮಕೂರು: ಜನರಲ್ಲಿ ಆತಂಕ ಮೂಡಿಸಿದ ಚಿರತೆ

ತುಮಕೂರಿನಲ್ಲಿ ಭಾನುವಾರ ಚಿರತೆಯೊಂದು ಕಾಣಿಸಿಕೊಂಡು ಆತಂಕ ಮೂಡಿಸಿದೆ...

ತುಮಕೂರಿನಲ್ಲಿ ಚಿರತೆ ಪ್ರತ್ಯಕ್ಷ (ಸಾಂದರ್ಭಿಕ ಚಿತ್ರ)
Srinivasa Murthy VN
Updated On : 28 Feb 2016, 4:16 am

ತುಮಕೂರು: ತುಮಕೂರಿನಲ್ಲಿ ಭಾನುವಾರ ಚಿರತೆಯೊಂದು ಕಾಣಿಸಿಕೊಂಡು ಆತಂಕ ಮೂಡಿಸಿದೆ.

ತುಮಕೂರಿನ ಹನುಮಂತನಗರದ ನಿವಾಸಿ ಗಂಗಣ್ಣ ಎಂಬುವವರ ಮನೆಯ ಕಾಂಪೌಂಡ್ ನಲ್ಲಿ ಕಾಣಿಸಿಕೊಂಡ ಚಿರತೆ ಜನರಲ್ಲಿ ಆತಂಕ ಮೂಡಿಸಿದ್ದು, ಮನೆಯಲ್ಲಿದ್ದ ನಾಯಿಯನ್ನು ತಿನ್ನಲು ಈ  ಚಿರತೆ ಬಂದಿರಬಹುದೆಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಹಾಡಹಗಲೇ ಚಿರತೆ ಕಾಂಪೌಂಡ್ ಹಾರಿದ್ದು, ತಕ್ಷಣ ಮನೆಯವರು ಗೇಟ್ ಲಾಕ್ ಮಾಡಿದ್ದಾರೆ. ಇದರಿಂದ ಭಯಗೊಂಡ ಚಿರತೆ ಮನೆಯ ಮಹಡಿ ಮೇಲೆ ಅಡಗಿ ಕೂತಿದೆ ಎಂದುಹೇಳಲಾಗುತ್ತಿದೆ.  ಘಟನಾ ಸ್ಥಳಕ್ಕೆ ಪ್ರಸ್ತುತ ಅರಣ್ಯಾಧಿಕಾರಿಗಳು ದೌಡಾಯಿಸಿದ್ದು, ಕಾರ್ಯಾಚರಣೆಗೆ ಸಿದ್ಧತೆ ನಡೆಸಿದ್ದಾರೆ.

ಹನುಮಂತನಗರದ ಸಮೀಪವೇ ಅರಣ್ಯ ಪ್ರದೇಶವಿರುವುದರಿಂದ ಅಲ್ಲಿಂದಲೇ ಚಿರತೆ  ಬಂದಿರುವ ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಚಿರತೆ ಹಾದು ಹೋಗಿರುವ ದಾರಿಯಲ್ಲೇ ದೇವಸ್ಥಾನವಿದ್ದು, ಅಲ್ಲಿ ಮಕ್ಕಳು ಆಟವಾಡುತ್ತಿದ್ದರು. ಒಂದು ವೇಳೆ ಅಲ್ಲಿಯೇ ಚಿರತೆ  ಕಾಣಿಸಿಕೊಂಡಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು ಎಂಬ ಆತಂಕ ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments