ಬೆಂಗಳೂರು: ಇಬ್ಬರ ಜಗಳ ಬಿಡಿಸಲು ಹೋದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ದೇವರಜೀವನಹಳ್ಳಿಯಲ್ಲಿ ನಡೆದಿದೆ.
ಎರಡು ಗುಂಪುಗಳ ನಡುವೆ ಜಗಳ ನಡೆಯುತ್ತಿತ್ತು. ಈ ಜಗಳ ಬಿಡಿಸಲು ಹೋದ ಸುಹೈಬ್ ಖಾನ್, ಎರಡು ಗುಂಪುಗಳನ್ನು ಶಾಂತಗೊಳಿಸುವ ಪ್ರಯತ್ನ ಮಾಡಿದ್ದಾನೆ.
ಆದರೆ, ಇದರಿಂದ ಆಕ್ರೋಶಗೊಂಡ ಶಾಬಾಜ್ ಖಾನ್ ಎಂಬಾತ ಡ್ರ್ಯಾಗನ್‌ನಿಂದ ಸುಹೈಬ್‌ಗೆ ಇರಿದಾಗ ಸುಹೈಬ್ ಗಂಭೀರವಾಗಿ ಗಾಯಗೊಂಡಿದ್ದಾನೆ.ಗಂಭೀರವಾಗಿ ಗಾಯಗೊಂಡ ಸುಹೈಬ್ ಖಾನ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ
ಸುಹೈಬ್ ಮೇಲೆ ಶಾಬಾಜ್ ಖಾನ್ ಹಲ್ಲೆ ಮಾಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಆರೋಪಿ ಶಾಬಾಜ್ ಹಾಗೂ ಇತರರ ವಿರುದ್ಧ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.