ಡಿ.ಕೆ ಶಿವಕುಮಾರ್ 
ರಾಜ್ಯ

ಪವರ್ ಮಿನಿಸ್ಟರ್ ನಿಂದಿಸಿದ ವ್ಯಕ್ತಿಯ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ಪವರ್ ಕಟ್ ಸಮಸ್ಯೆಗಾಗಿ ಇಂಧನ ಸಚಿವ ಡಿ.ಕೆ. ಶಿವಕುಮಾರ್​ಗೆ ದೂರವಾಣಿ ಕರೆ ಮಾಡಿ ನಿಂದಿಸಿದ ಆರೋಪದಲ್ಲಿ ಸುಳ್ಯ ತಾಲೂಕಿನ ಬೆಳ್ಳಾರೆಯ ಸಾಯಿ ಗಿರಿಧರ ರೈ ...

ಸುಳ್ಯ: ಪವರ್ ಕಟ್ ಸಮಸ್ಯೆಗಾಗಿ ಇಂಧನ ಸಚಿವ ಡಿ.ಕೆ. ಶಿವಕುಮಾರ್​ಗೆ  ದೂರವಾಣಿ ಕರೆ ಮಾಡಿ ನಿಂದಿಸಿದ ಆರೋಪದಲ್ಲಿ ಸುಳ್ಯ ತಾಲೂಕಿನ ಬೆಳ್ಳಾರೆಯ ಸಾಯಿ ಗಿರಿಧರ ರೈ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ವಿದ್ಯುತ್ ಸಮಸ್ಯೆ ತೀವ್ರಗೊಂಡಿದ್ದು, ಬೆಳ್ಳಾರೆ  ಸುತ್ತಮುತ್ತ ಕೆಲವು ದಿನಗಳಿಂದ ನಿರಂತರ ವಿದ್ಯುತ್ ಕಡಿತ ಉಂಟಾಗುತ್ತಿದೆ. ಇದರಿಂದ ರೋಸಿ ಹೋಗಿದ್ದ ಗಿರಿಧರ ರೈ, ಭಾನುವಾರ ರಾತ್ರಿ ವಿದ್ಯುತ್ ಕಡಿತ ಉಂಟಾದಾಗ ಶಿವಕುಮಾರ್ ಅವರಿಗೆ ವಿದ್ಯುತ್ ಸಮಸ್ಯೆ ಕುರಿತು ತಿಳಿಸಲೆಂದು 7.30ರಲ್ಲಿ ದೂರವಾಣಿ ಕರೆ ಮಾಡಿದ್ದಾರೆ. ಈ ಸಂದರ್ಭ ಆಕ್ರೋಶಗೊಂಡು ಸಚಿವರಿಗೆ ನಿಂದಿಸಿ ಬೆದರಿಕೆ ಹಾಕಿದ್ದರು. .

ಈ ಕುರಿತು ಹಿರಿಯ ಅಧಿಕಾರಿಗಳಿಗೆ ಇಂಧನ ಸಚಿವರು ಮಾಹಿತಿ ನೀಡಿದ್ದಾರೆ. ಅವರ ಸೂಚನೆಯಂತೆ ಸುಳ್ಯದ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನೀಡಿದ ದೂರಿನ ಅನ್ವಯ ಸುಳ್ಯ ಪೊಲೀಸರು ಭಾನುವಾರ ರಾತ್ರಿ ಬೆಳ್ಳಾರೆಯ ಅವರ ಮನೆಯಿಂದ ರೈ ಅವರನ್ನು ಬಂಧಿಸಿದ್ದಾರೆ. ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಷರತ್ತು ಬದ್ಧ ಜಾಮೀನು ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT