ಬೆಂಗಳೂರು: ಮಹಿಳೆಯರ ಚಿನ್ನದ ಸರಗಳನ್ನು ಕಸಿದು ಪರಾರಿಯಾಗುತ್ತಿದ್ದ ಇರಾನಿಗ್ಯಾಂಗ್ ನ ಮತ್ತಿಬ್ಬರನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಆಂಧ್ರದ ಚಿತ್ತೂರು ಜಿಲ್ಲೆಯ ಕಲ್ಲಿಕೇರಿಯ ಜಬಿವುಲ್ಲಾ(27), ಮಹಮ್ಮೋದ್ ಅಲಿ(19) ಬಂಧಿತ ಆರೋಪಿಗಳು. ಆರೋಪಿಗಳಿಂದ 421 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, 10 ಸರಗಳವು ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ.
ಈ ಗ್ಯಾಂಗ್ ನಗರದ ವಿವಿದೆಡೆ ಸಂಚರಿಸಿ ಒಂಟಿ ಮಹಿಳೆಯರ ಚಿನ್ನದ ಸರಗಳನ್ನು ಕಸಿದು ಪರಾರಿಯಾಗುತ್ತಿದ್ದರು.