ಬಾಲಕರನ್ನು ಥಳಿಸುತ್ತಿರುವ ದೃಶ್ಯ 
ರಾಜ್ಯ

ಹೊಸಕೋಟೆಯಲ್ಲೊಂದು ಅಮಾನವೀಯ ಘಟನೆ: ಕದ್ದರೆಂದು ಬಾಲಕರನ್ನು ವಿವಸ್ತ್ರಗೊಳಿಸಿ ಮಾರಣಾಂತಿಕ ಹಲ್ಲೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಏಳು...

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಏಳು ಜನರ ತಂಡವೊಂದು ಮೂವರು ಅಪ್ರಾಪ್ತ ಬಾಲಕರನ್ನು ವಿವಸ್ತ್ರಗೊಳಿಸಿ ಅಮಾನವೀಯವಾಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 
ಕಳೆದ ಜೂನ್‌ 30 ರಂದು ಈ ಘಟನೆ ನಡೆದಿದ್ದು, ವ್ಯಾಪಾರಿ ಮುಸ್ತಾಕ್‌ ಎನ್ನುವವರ ಅಂಗಡಿಯಲ್ಲಿ ಕಳ್ಳತನ ನಡೆದಿದ್ದು, ಇದೇ ಆರೋಪದಲ್ಲಿ ಮುಸ್ತಾಕ್‌ ಅವರ ಪುತ್ರ ನೂರುದ್ದೀನ್‌ ತನ್ನ 6 ಮಂದಿ ಸ್ನೇಹಿತರೊಂದಿಗೆ ಬಾಲಕರನ್ನು ಶಾಲೆಯಿಂದ ಬಯಲಿಗೆ ಎಳೆದೊಯ್ದು ವಿವಸ್ತ್ರಗೊಳಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಬಾಲಕರು ಬಿದ್ದು ಗೊಗೆರೆದರೂ ಬಿಡದ ಹಲ್ಲೆ ಕೋರರು ಬಾಲಕರ ಕೈಕಾಲುಗಳನ್ನು ತಿರುಚಿ, ಅವರ ಮೈಮೇಲೆ ನಿಂತು ರಕ್ಕಸರಂತೆ ವರ್ತಿಸಿದ್ದಾರೆ. ಈ ಎಲ್ಲಾ ಅಟ್ಟಹಾಸವನ್ನು ವಿಡಿಯೋ ಚಿತ್ರಿಕರಣ ಮಾಡಿಕೊಂಡು ಇತರರಿಗೆ ತೋರಿಸಿ ತಮ್ಮ ಏರಿಯಾದಲ್ಲಿ ಹವಾ ಹೇಗಿದೆ ಎನ್ನುವದನ್ನು ತೋರಿಸಲು ಮುಂದಾಗಿದ್ದಾರೆ. 
ಹಲ್ಲೆಯ ಬಳಿಕ ತೀವ್ರ ಅಸ್ವಸ್ಥಗೊಂಡ ಬಾಲಕರು ಮನೆಗೆ ಬಂದಾಗ ಆತಂಕಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ಬೇಜವಾಬ್ದಾರಿತನ ಪ್ರದರ್ಶಿಸಿ ಪ್ರಕರಣ ದಾಖಲಿಸಿಲು ಹಿಂಜರಿದಿದ್ದಾರೆ.
ಇದೀಗ ಘಟನೆ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗುತ್ತಿದ್ದಂತೆ ಹೊಸಕೋಟೆ ಪೊಲೀಸರು ಪ್ರರಕಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್