ಬಾಲಕರ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ 
ರಾಜ್ಯ

ಬಾಲಕರನ್ನು ವಿವಸ್ತ್ರಗೊಳಿಸಿ ಅಮಾನವೀಯ ಹಲ್ಲೆ ಪ್ರಕರಣ: ನಾಲ್ವರ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಮೂವರು ಅಪ್ರಾಪ್ತ...

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಮೂವರು ಅಪ್ರಾಪ್ತ ಬಾಲಕರನ್ನು ವಿವಸ್ತ್ರಗೊಳಿಸಿ ಅಮಾನವೀಯವಾಗಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಕೋಟೆ ಪೊಲೀಸರು ಶನಿವಾರ ನಾಲ್ವರನ್ನು ಬಂಧಿಸಿದ್ದಾರೆ. 
ಕಳೆದ ಜೂನ್‌ 30 ರಂದು ಈ ಘಟನೆಗೆ ಸಂಬಂಧಿಸಿದಂತೆ ಇಂದು ಏಳು ಆರೋಪಿಗಳ ಪೈಕಿ ನಾಲ್ವರನ್ನು ಬಂಧಿಸಿದ್ದು, ಶಾಮಶೇರ್, ಜಬ್ಬಿ, ಆಯುಬ್ ಹಾಗೂ ಗಾಂಧಿ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ.
ವ್ಯಾಪಾರಿ ಮುಸ್ತಾಕ್‌ ಎನ್ನುವವರ ಅಂಗಡಿಯಲ್ಲಿ ಕಳ್ಳತನ ನಡೆದಿದ್ದು, ಇದೇ ಆರೋಪದಲ್ಲಿ ಮುಸ್ತಾಕ್‌ ಅವರ ಪುತ್ರ ನೂರುದ್ದೀನ್‌ ತನ್ನ 6 ಮಂದಿ ಸ್ನೇಹಿತರೊಂದಿಗೆ ಬಾಲಕರನ್ನು ಶಾಲೆಯಿಂದ ಬಯಲಿಗೆ ಎಳೆದೊಯ್ದು ವಿವಸ್ತ್ರಗೊಳಿಸಿ ಹಿಗ್ಗಾಮುಗ್ಗಾ ಥಳಿಸಿದ್ದರು.
ಬಾಲಕರು ಬಿದ್ದು ಗೊಗೆರೆದರೂ ಬಿಡದ ಹಲ್ಲೆ ಕೋರರು ಬಾಲಕರ ಕೈಕಾಲುಗಳನ್ನು ತಿರುಚಿ, ಅವರ ಮೈಮೇಲೆ ನಿಂತು ರಕ್ಕಸರಂತೆ ವರ್ತಿಸಿದ್ದಾರೆ. ಈ ಎಲ್ಲಾ ಅಟ್ಟಹಾಸವನ್ನು ವಿಡಿಯೋ ಚಿತ್ರಿಕರಣ ಮಾಡಿಕೊಂಡು ಇತರರಿಗೆ ತೋರಿಸಿ ತಮ್ಮ ಏರಿಯಾದಲ್ಲಿ ಹವಾ ಹೇಗಿದೆ ಎನ್ನುವದನ್ನು ತೋರಿಸಲು ಮುಂದಾಗಿದ್ದಾರೆ. 
ಹಲ್ಲೆಯ ಬಳಿಕ ತೀವ್ರ ಅಸ್ವಸ್ಥಗೊಂಡ ಬಾಲಕರು ಮನೆಗೆ ಬಂದಾಗ ಆತಂಕಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ಬೇಜವಾಬ್ದಾರಿತನ ಪ್ರದರ್ಶಿಸಿ ಪ್ರಕರಣ ದಾಖಲಿಸಿಲು ಹಿಂಜರಿದಿದ್ದಾರೆ.
ಇದೀಗ ಘಟನೆ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗುತ್ತಿದ್ದಂತೆ ಹೊಸಕೋಟೆ ಪೊಲೀಸರು ಪ್ರರಕಣ ದಾಖಲಿಸಿಕೊಂಡಿದ್ದು, ಇತರೆ ಮೂವರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!