ಸಾಂದರ್ಭಿಕ ಚಿತ್ರ 
ರಾಜ್ಯ

ಮಕ್ಕಳನ್ನು ವಿವಸ್ತ್ರಗೊಳಿಸಿ ಥಳಿತ : ಮೂವರು ಪೊಲೀಸರ ಅಮಾನತು

ಮಕ್ಕಳನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಕೋಟೆ ಠಾಣೆಯ ಎಸ್‌ಐ ಹಾಗೂ ಇಬ್ಬರು ಹೆಡ್‌ ಕಾನ್‌ಸ್ಟೆಬಲ್‌ಗಳನ್ನು ಕರ್ತವ್ಯ ಲೋಪ ...

ಬೆಂಗಳೂರು: ಮಕ್ಕಳನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಹೊಸಕೋಟೆ ಠಾಣೆಯ ಎಸ್‌ಐ ಹಾಗೂ ಇಬ್ಬರು ಹೆಡ್‌ ಕಾನ್‌ಸ್ಟೆಬಲ್‌ಗಳನ್ನು ಕರ್ತವ್ಯ ಲೋಪ ಆರೋಪದಡಿ ಅಮಾನತುಗೊಳಿಸಲಾಗಿದೆ.

ಆರೋಪಿಗಳ ವಿರುದ್ಧ ಮೊದಲು ಹಲ್ಲೆ  ಹಾಗೂ ಅಪಹರಣ ಆರೋಪದಡಿ ಮಾತ್ರ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ವಿಡಿಯೊ ಪರಿಶೀಲಿಸಿದ ಬಳಿಕ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯನ್ನೂ (ಪೋಕ್ಸೊ) ಪ್ರಯೋಗಿಸಿದ್ದಾರೆ.

ಎಸ್‌ಐ ದಯಾನಂದ್, ಹೆಡ್‌ ಕಾನ್‌ಸ್ಟೆಬಲ್‌ಗಳಾದ ರಾಜು ಮತ್ತು ದಯಾನಂದ್ ಅವರನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ಆರೋಪಿಗಳು ಮಕ್ಕಳನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ಎಸಗಿರುವುದರಿಂದ ಅವರ ವಿರುದ್ಧ ಪೋಕ್ಸೊ ಕಾಯ್ದೆ ಅಡಿಯೂ ಪ್ರಕರಣ ದಾಖಲಿಸಲಾಗಿದೆ.

ಹಲ್ಲೆ ನಡೆದ ದಿನ ದೂರು ದಾಖಲಿಸಿಕೊಳ್ಳದೆ ಪೊಲೀಸರು ವಿಳಂಬ ಮಾಡಿದ್ದಾರೆ. ಮಾರನೇ ದಿನ ಎಫ್‌ಐಆರ್ ದಾಖಲಿಸಿಕೊಂಡರೂ, ಸೂಕ್ತ ಸೆಕ್ಷನ್‌ಗಳನ್ನು ಹಾಕದೆ ನಿರ್ಲಕ್ಷ್ಯ ತೋರಿದ್ದಾರೆ. ಇದರಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ. ಬಾಲಕನ ಅಪಹರಣವಾದ ಬಳಿಕವೂ ಶಿಕ್ಷಕರು ಸಂಬಂಧಪಟ್ಟವರ ಗಮನಕ್ಕೆ ತಂದಿಲ್ಲ.

ಅಂಗಡಿಯಲ್ಲಿ ಕಳವು ಮಾಡಿದ ಆರೋಪದ ಮೇಲೆ ಜೂನ್ 30ರಂದು ಮೂವರು ಮಕ್ಕಳನ್ನು ಕಾರಿನಲ್ಲಿ ಅಪಹರಿಸಿದ್ದ ಯುವಕರು, ಹೊಸಕೋಟೆಯ ಸಂತೆಗೇಟ್ ಬಳಿ ಅವರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!