ಸಾಂದರ್ಭಿಕ ಚಿತ್ರ 
ರಾಜ್ಯ

ಇಸ್ರೋ ವೃತ್ತದ ಬಳಿ ಸರಣಿ ಅಪಘಾತ: ಇಬ್ಬರು ಯುವತಿಯರು ಗಂಭೀರ ಗಾಯ

ಇಸ್ರೋ ವೃತ್ತದ ಬಳಿ ಸೋಮವಾರ ರಾತ್ರಿ ನಡೆದ ಸರಣಿ ಅಪಘಾತದಲ್ಲಿ ಇಬ್ಬರು ಯುವತಿಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ...

ಬೆಂಗಳೂರು: ಇಸ್ರೋ ವೃತ್ತದ ಬಳಿ ಸೋಮವಾರ ರಾತ್ರಿ ನಡೆದ ಸರಣಿ ಅಪಘಾತದಲ್ಲಿ ಇಬ್ಬರು ಯುವತಿಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಸೋಮವಾರ ರಾತ್ರಿ 7.30 ರ ಸುಮಾರಿಗೆ ಇಸ್ರೋ ಸಿಗ್ನಲ್ ಬಳಿ ವೇಗವಾಗಿ ಬರುತ್ತಿದ್ದ ಮಿನಿವ್ಯಾನ್ ಒಂದು ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಆಟೋ ಹಾಗೂ ಬೈಕ್ ಜಖಂಗೊಂಡಿದೆ. ಘಟನೆಯಲ್ಲಿ ಇಬ್ಬರು ಯುವತಿಯರು ಗಂಭೀರವಾಗಿಗೊಂಡಿದ್ದಾರೆಂದು ತಿಳಿದುಬಂದಿದೆ.

ಸಹಾನ (25) ಶೃತಿ (21) ಗಾಯಗೊಂಡ ಯುವತಿಯರಾಗಿದ್ದು, ಇಬ್ಬರು ಬೆಳಗಾವಿ ಮೂಲದವರಾಗಿದ್ದಾರೆ. ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಲಾಗುತ್ತಿದೆ.

ಸಹನ ಪರಿಸ್ಥಿತಿ ಕುರಿತಂತೆ ಆಕೆಯ ಪೋಷಕರು ಮಾತನಾಡಿದ್ದು, ಸಹನ ಪರಿಸ್ಥಿತಿ ಚಿಂತಾಜನಕವಾಗಿದ್ದು, ಶಸ್ತ್ರಚಿಕಿತ್ಸೆ ಮಾಡಬೇಕಿದೆ ಎಂದು ವೈದ್ಯರು ಹೇಳಿದ್ದಾರೆಂದು ಹೇಳಿದ್ದಾರೆ.

ಆರೋಪಿ ಇನ್ಫ್ಯಾಂಟ್ ಟ್ರಾವೆಲ್ ಏಜೆನ್ಸಿಯ ಉದ್ಯೋಗಿಯಾಗಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವೇಗವಾಗಿ ಬಂದ ಮಿನಿ ವ್ಯಾನ್ ಮಹಿಳೆಗೆ ಡಿಕ್ಕಿ ಹೊಡೆದು ಕೆಲ ದೂರದ ವರೆಗೂ ಎಳೆದೊಯ್ದಿತ್ತು. ನಂತರ ಸ್ಥಳೀಯರು ಆಕೆಯನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಸ್ಥಳೀಯರೇ ಚಾಲಕ ಅನಂದಪ್ಪ ಎಂಬುವವರನ್ನು ಹಿಡಿದಿದ್ದರು. ಅಪಘಾತ ಮಾಡಿದ ಸಮಯದಲ್ಲಿ ಚಾಲಕ ಮದ್ಯಪಾನ ಮಾಡಿದ್ದ. ಈ ವೇಳೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವ ಸ್ಥಿತಿಯಲ್ಲಿ ಆತನಿರಲಿಲ್ಲ ಎಂದು ಇಂದ್ರನೀಲ್ ಎಂಬುವವರು ಹೇಳಿದ್ದಾರೆ.

7.40ರ ಸುಮಾರಿಗೆ ಸಂಚಾರಿ ಪೊಲೀಸ್ ಪೇದೆಯೊಬ್ಬರು ಸ್ಥಳಕ್ಕೆ ಬಂದರು. ನಂತರ ಚಾಲಕ ಆನಂದಪ್ಪನನ್ನು ಆರ್.ಟಿ. ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಆತನ ಸ್ಥಿತಿ ನೋಡಿದ್ದರೆ ಕುಡಿದಿದ್ದಾನೆಂಬುದು ಸ್ಪಷ್ಟವಾಗುತ್ತಿತ್ತು. ಹೀಗಾಗಿ ರಕ್ತ ಪರೀಕ್ಷೆ ಮಾಡಿಸಲು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುವಂತೆ ಪೊಲೀಸರಿಗೆ ತಿಳಿಸಿದರು. ಆದರೆ, ಪೊಲೀಸರು ಇದಕ್ಕೆ ಒಪ್ಪಲಿಲ್ಲ ಎಂದು ಹೇಳಿದ್ದಾರೆ.

ನಂತರ ಮತ್ತೆ ಮಂಗಳವಾರ ಪೊಲೀಸರ ಬಳಿ ಮಾತನಾಡಿದಾಗ ಆನಂದಪ್ಪನನ್ನು ಕೆ.ಜಿ. ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆತ ಕುಡಿದಿರಲಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದರು. ನಂತರ ಪರ ವಕೀಲರೊಬ್ಬರ ಜೊತೆ ಆಸ್ಪತ್ರೆಗೆ ಭೇಟಿ ನೀಡಿದಾಗ ಆಸ್ಪತ್ರೆ ಸಿಬ್ಬಂದಿಗಳು ಆರ್.ಟಿ. ನಗರ ಪೊಲೀಸ್ ಕಡೆಯಿಂದ ಆ ರೀತಿಯ ಯಾವುದೇ ಪರೀಕ್ಷೆಯನ್ನು ಮಾಡಿಲ್ಲ ಎಂದು ಹೇಳಿದರು.

ಘಟನೆ ಕುರಿತಂತೆ ಮಾತನಾಡಿರುವ (ಉತ್ತರ ವಿಭಾಗ) ಡಿಸಿಪಿ ರೇಣುಕಾ ಶಿವಕುಮಾರ್ ಅವರು, ಆರ್.ಟಿ. ನಗರ ಪೊಲೀಸ್ ಠಾಣೆಯಲ್ಲಿ ಮಾಹಿತಿಯನ್ನು ಪರಿಶೀಲಿಸಲಾಗಿದೆ. ಬ್ರೀಥಲೈಜರ್ 00 ಎಂದು ಫಲಿತಾಂಶ ತೋರಿಸಿದೆ. ಇದನ್ನು ಸಾಬೀತು ಪಡಿಸಲು ನಮ್ಮ ಬಳಿ ವಿಡಿಯೋ ಸಾಕ್ಷಿ ಕೂಡ ಇದೆ. ಆರೋಪಿಯನ್ನು ಕೆಸಿ. ಜನರಲ್ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಲಾಗಿದೆ. ಆದರೆ, ಆತ ಮದ್ಯಪಾನ ಮಾಡಿಲ್ಲ ಎಂದು ವರದಿ ನೀಡಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!