ಸಾಂದರ್ಭಿಕ ಚಿತ್ರ 
ರಾಜ್ಯ

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬ್ಯಾಂಕ್ ಉದ್ಯೋಗಿ

ಸ್ಥಳೀಯ ಬ್ಯಾಂಕ್ ವೊಂದರಲ್ಲಿ ಖಜಾಂಚಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ಗೊಲ್ಲಹಳ್ಳಿಯಲ್ಲಿ...

ಬೆಂಗಳೂರು: ಸ್ಥಳೀಯ ಬ್ಯಾಂಕ್ ವೊಂದರಲ್ಲಿ ಖಜಾಂಚಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ಗೊಲ್ಲಹಳ್ಳಿಯಲ್ಲಿ ಮಂಗಳವಾರ ನಡೆದಿದೆ.

ಕೃಷ್ಣ (39) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು, ಆನೇಕಲ್ ನ ಎಸ್.ಜಿ. ಲೇಔಟ್ ನಿವಾಸಿಯಾಗಿದ್ದಾನೆ. ಕೃಷಿ ಸಹಕಾರಿ ಬ್ಯಾಂಕ್ ನ ಶಾಖೆಯಲ್ಲಿ ಖಜಾಂಚಿಯಾಗಿ ಕಾರ್ಯನಿರ್ವಹಿಸುತ್ತಿದ್ದ.

ಎಂದಿನಂತೆ ಕೆಲಸಕ್ಕೆ ನಿನ್ನೆ ಬೆಳಿಗ್ಗೆ ದ್ವಿಚಕ್ರ ವಾಹನದಲ್ಲಿ ಹೋಗಿರುವ ಈತ ಗೊಲ್ಲಹಳ್ಳಿಯಲ್ಲಿರುವ ನೀಲಗಿರಿ ತೋಪಿಗೆ ಹೋಗಿದ್ದಾನೆ. ನಂತರ ಸ್ಥಳದಲ್ಲಿ ಮದ್ಯಪಾನ ಮಾಡಿ, ತನ್ನ ಬಳಿಯಿದ್ದ ಪಿಸ್ತೂಲಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆಂದು ಪೊಲೀಸರು ಹೇಳಿದ್ದಾರೆ.

ಗುಂಡಿನ ಶಬ್ಧ ಕೇಳುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಹೋಗಿದ್ದಾರೆ. ಪರಿಸ್ಥಿತಿಯನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಕೂಡಲೇ ವ್ಯಕ್ತಿಯನ್ನು ನಗರದ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ವ್ಯಕ್ತಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಪ್ರಮುಖ ಕಾರಣವೇನೆಂಬುದನ್ನು ತಿಳಿಯಲು ವಿಚಾರಣೆ ನಡೆಸಲಾಗುತ್ತಿದೆ. ಆತ್ಮಹತ್ಯೆಗೆ ಬಳಸಿದ ಪಿಸ್ತೂಲು ಪರವಾನಗಿ ಪಡೆದದ್ದಾಗಿದೆ ಎಂದು ಆತನ ಕುಟುಂಬಸ್ಥರು ಹೇಳುತ್ತಿದ್ದಾರೆ. ಈ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಸ್ತುತ ಪ್ರಕರಣ ಜಿಗಣಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!