ರಾಜ್ಯ

ಡಿಸಿಗೆ ಬೆದರಿಕೆ ಪ್ರಕರಣ: ಶಿಖಾ ಪತಿ, ಮಂಡ್ಯ ಜಿಲ್ಲಾಧಿಕಾರಿ ಮೂಲಕ ಮರಿಗೌಡ ರಾಜಿ ಯತ್ನ

Shilpa D

ಮೈಸೂರು: ತಹಶೀಲ್ದಾರ್ ಒಬ್ಬರ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ಸಿ, ಶಿಖಾ ಅವರಿಗೆ ಬೆದರಿಕೆ ಹಾಕಿದ್ದ, ಸಿಎಂ ಆಪ್ತ ಹಾಗೂ ಮೈಸೂರು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಮರಿಗೌಡ ವಿರುದ್ಧ ಶಿಖಾ ದೂರು ದಾಖಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮರಿಗೌಡ ನಾಪತ್ತೆಯಾಗಿದ್ದು, ರಾಜಿ ಸಂಧಾನಕ್ಕಾಗಿ ಮಂಡ್ಯ ಜಿಲ್ಲಾಧಿಕಾರಿ ಹಾಗೂ ಶಿಖಾ ಅವರ ಪತಿ ಅಜಯ್ ನಾಗಭೂಷಣ್ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಆದರೆ ಅಜಯ್ ನಾಗಭೂಷಣ್ ಮರಿಗೌಡ ಅವರಿಗೆ ಯಾವುದೇ ಭರವಸೆ ನೀಡಿಲ್ಲ, ಕಾನೂನಿಗೆ ತನ್ನದೆ ನೀತಿ ನಿಯಮಗಳಿವೆ, ಅದರಂತೆ ನಡೆಯಬೇಕು ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜಿ ಸಂಧಾನಕ್ಕೆ ಜಿಲ್ಲಾಧಿಕಾರಿ ಒಪ್ಪದಿರುವ ಹಿನ್ನೆಲೆಯಲ್ಲಿ ಮರಿಗೌಡ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ಇನ್ನೂ ಮರಿಗೌಡ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಮಾಧ್ಯಮಗಳಿಗೆ ಸಿಗುತ್ತಿಲ್ಲ.

2013 ರ ವಿಧಾನ ಸಭೆ ಚುನಾವಣೆ ವೇಳೆ ಚಾಮುಂಡೇಶ್ವರಿ ಕ್ಷೇತ್ರದ ಟಿಕೆಟ್ ತಪ್ಪಿದ್ದಕ್ಕೆ ಮರಿಗೌಡ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿರುವ ಆಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಜಿಲ್ಲಾಧಿಕಾರಿ ಶಿಖಾ ಅವರಿಗೆ ಬೆದರಿಕೆ ಹಾಕಿರುವ ಮರಿಗೌಡ ಅವರನ್ನು ಮೂರು ದಿನ ಕಳೆದರು ಬಂಧಿಸಲಿಲ್ಲ, ಹೀಗಾಗಿ ಕೂಡಲೇ ಅವರನ್ನು ಬಂಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಮರಿಗೌಡ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ರಾಜ್ಯ ದ್ರಾವಿಡ ಮಹಾಸಭಾ ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

SCROLL FOR NEXT