ರಂಜಾನ್: ಜುಲೈ 7ರಂದು ಸರ್ಕಾರಿ ರಜೆ
ರಂಜಾನ್ ನಿಮಿತ್ತ ನಾಳೆ ಅಂದರೆ ಜುಲೈ 7 ರಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಆದೇಶ ...
ಬೆಂಗಳೂರು; ರಂಜಾನ್ ನಿಮಿತ್ತ ನಾಳೆ ಅಂದರೆ ಜುಲೈ 7 ರಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈದ್ ಉಲ್ ಪಿತ್ರ್ ಹಿನ್ನೆಲೆಯಲ್ಲಿ ಮಂಗಳವಾರ ಚಂದ್ರ ದರ್ಶನವಾಗದ ಹಿನ್ನೆಲೆಯಲ್ಲಿ ಗುರುವಾರ ರಂಜಾನ್ ಆಚರಣೆ ಮಾಡಲು ಕೇಂದ್ರೀಯ ಚಂದ್ರ ದರ್ಶನ ಸಮಿತಿ ನಿರ್ಧರಿಸಿದೆ’ ಎಂದು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಳಿದ್ದಾರೆ.
ಜುಲೈ 7ರಂದು ಪಿಯುಸಿ ಪೂರಕ ಪರೀಕ್ಷೆ ನಡೆಯಬೇಕಿತ್ತು, ಆದರೆ ಸರ್ಕಾರಿ ರಜೆ ಇರುವ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ. ಶೀಘ್ರವೇ ಪರೀಕ್ಷೆಯ ದಿನಾಂಕ ಪ್ರಕಟಿಸುವುದಾಗಿ ಪಿಯು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.