ಮೈಸೂರು ಜಿಲ್ಲಾಧಿಕಾರಿ ಸಿ. ಶಿಖಾ 
ರಾಜ್ಯ

ಡಿಸಿ ಬೆದರಿಕೆ ಪ್ರಕರಣ: ಜಿಲ್ಲಾಧಿಕಾರಿ ವಾಹನ ಚಾಲಕ, ಗನ್ ಮ್ಯಾನ್ ಹೇಳಿಕೆ ದಾಖಲು

ಮುಖ್ಯಮಂತ್ರಿ ಆಪ್ತ ಗೆಳೆಯ ಮರೀಗೌಡ ಅವರು ಮೈಸೂರು ಜಿಲ್ಲಾಧಿಕಾರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಜಾರ್ ಬಾದ್ ಪೊಲೀಸರು ಶಿಖಾ ಅವರ ವಾಹನ ಚಾಲಕ ಹಾಗೂ...

ಮೈಸೂರು: ಮುಖ್ಯಮಂತ್ರಿ ಆಪ್ತ ಗೆಳೆಯ ಮರೀಗೌಡ ಅವರು ಮೈಸೂರು ಜಿಲ್ಲಾಧಿಕಾರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಜಾರ್ ಬಾದ್ ಪೊಲೀಸರು ಶಿಖಾ ಅವರ ವಾಹನ ಚಾಲಕ ಹಾಗೂ ಗನ್ ಮ್ಯಾನ್ ಹೇಳಿಕೆಯನ್ನು ದಾಖಲು ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಜಿಲ್ಲಾಧಿಕಾರಿ ಪ್ರಕರಣವನ್ನು ನಜಾರ್ ಬಾದ್ ಪೊಲೀಸರು ತನಿಖೆ ನಡೆಸುತ್ತಿದ್ದು, ಇದರಂತೆ ತನಿಖೆ ಕೈಗೊಂಡಿರುವ ಎಸಿಬಿ ಬಿ.ಎಸ್. ರಾಜಶೇಖರ್ ಅವರು. ಶಿಖಾ ಅವರ ಗನ್ ಮ್ಯಾನ್ ಆಗಿರುವ ತಂಗವೇಲು ಹಾಗೂ ಕಾರು ಚಾಲಕನ ಹೇಳಿಕೆಗಳನ್ನು ದಾಖಲು ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ.

ಮರೀಗೌಡ ಅವರು ಜಿಲ್ಲಾಧಿಕಾರಿ ಶಿಖಾ ಅವರಿಗೆ ಬೆದರಿಕೆ ಹಾಕಿದ ಪ್ರಕರಣ ಇದೀಗ ವಿಧಾನಮಂಡಲದಲ್ಲೂ ಸದ್ದು ಮಾಡುತ್ತಿದ್ದು, ವಿರೋಧ ಪಕ್ಷಗಳು ಸಿದ್ದರಾಮಯ್ಯ ವಿರುದ್ಧ ಕಿಡಿಕಾರುತ್ತಿವೆ. ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರೂ ಕೂಡ ಪ್ರತಿಭಟನೆ ನಡೆಸುತ್ತಿದ್ದು, ಮರೀಗೌಡ ಅವರ ಬಂಧನದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗುತ್ತಿವೆ.

ಈ ಮಧ್ಯೆಯೇ ಮರೀಗೌಡ ಅವರನ್ನು ಬಂಧನಕ್ಕೊಳಪಡಿಸದಂತೆ ನಗರ ಪೊಲೀಸರ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!