ಡಿಜಿಪಿ ಓಂ ಪ್ರಕಾಶ್ ರಾವ್ ಮತ್ತು ಸಿಎಂ ಸಿದ್ದರಾಮಯ್ಯ 
ರಾಜ್ಯ

ನಿಮ್ಮ ಅನುಮತಿಯಿಲ್ಲದೇ ಹೇಗೆ ಸಂದರ್ಶನ ನೀಡಿದರು: ಡಿಜಿಪಿ ವಿರುದ್ಧ ಸಿಎಂ ಕೆಂಡಾಮಂಡಲ

ಮಂಗಳೂರು ಡಿವೈಎಸ್‌ಪಿ ಗಣಪತಿ ಆತ್ಯಹತ್ಯೆಗೂ ಮುನ್ನ ಖಾಸಗಿ ಚಾನೆಲ್ ಗಳಿಗೆ ಸಂದರ್ಶನ ನೀಡಿರುವ ಸಂಬಂಧ ಸಿಎಂ ಸಿದ್ದರಾಮಯ್ಯ ಪೊಲೀಸ್ ಮಹಾ ನಿರ್ದೇಶಕ..

ಬೆಂಗಳೂರು; ಮಂಗಳೂರು ಡಿವೈಎಸ್‌ಪಿ ಗಣಪತಿ ಆತ್ಯಹತ್ಯೆಗೂ ಮುನ್ನ ಖಾಸಗಿ ಚಾನೆಲ್ ಗಳಿಗೆ ಸಂದರ್ಶನ ನೀಡಿರುವ ಸಂಬಂಧ ಸಿಎಂ ಸಿದ್ದರಾಮಯ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಗಣಪತಿ ಅವರ ಆತ್ಮಹತ್ಯೆ ಸಂಬಂಧ ವಿವರಣೆ ನೀಡಲು ಸಿಎಂ ನಿವಾಸ ಕಾವೇರಿಗೆ ಓಂ ಪ್ರಕಾಶ್ ಆಗಮಿಸಿದ್ದರು. ಈ ವೇಳೆ ಡಿಜಿಪಿ ವಿರುದ್ಧ ಹರಿಹಾಯ್ದ ಸಿಎಂ ಗೃಹ ಸಚಿವ ಪರಮೇಶ್ವರ್ ವಿರುದ್ಧ ಹಿಗ್ಗಾಮುಗ್ಗ ಬೈಯ್ದಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಡಿವೈಎಸ್‌ಪಿ ಗಣಪತಿಯವರು ಆತ್ಮಹತ್ಯೆಗೂ ಮುನ್ನ ಖಾಸಗಿ ಚಾನೆಲ್‌ಗೆ ಸಂದರ್ಶನ ನೀಡಿದ್ದಾರೆ. ಈ ಬಗ್ಗೆ ನಿಮಗೆ ಮಾಹಿತಿ ಇರಲಿಲ್ಲವೇ? ಇಷ್ಟಕ್ಕೂ ಅವರು ನಿಮ್ಮ ಅನುಮತಿ ಇಲ್ಲದೆ ಸಂದರ್ಶನ ನೀಡಿದ್ದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ. ಗಣಪತಿಯವರ ಮನಸ್ಥಿತಿ ತಿಳಿದುಕೊಳ್ಳಲು ನಿಮ್ಮಿಂದ ಸಾಧ್ಯವಾಗಲಿಲ್ಲವೇ? ಅವರ ಮನಸ್ಥಿತಿ ಅರಿಯುವ ಸಾಮರ್ಥ್ಯ ನಿಮಗಿಲ್ಲವೇ ಎಂದ ಮುಖ್ಯಮಂತ್ರಿಗಳು, ಅಧಿಕಾರಿಗಳ ವರ್ತನೆ ಮೇಲೆ ನಿಗಾ ಇರಿಸಬೇಕು. ಅವರ ಮನಸ್ಥಿತಿ ಅರಿತು ತತ್‌ಕ್ಷಣವೇ ಸಮಸ್ಯೆ ಪರಿಹಾರಿಸಲು ಮುಂದಾಗಬೇಕಿತ್ತು ಎಂದು ಗುಡುಗಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!