ಎಂ.ಕೆ.ಗಣಪತಿ 
ರಾಜ್ಯ

ಡಿ ವೈಎಸ್ ಪಿ ಗಣಪತಿ ಶಾಂತ ಸ್ವಭಾವದ ವ್ಯಕ್ತಿ; ಐಜಿಪಿ

ಡಿವೈಎಸ್ ಪಿ ಗಣಪತಿ ಪ್ರಶಾಂತ ಮನಸ್ಥಿತಿಯ ಅಧಿಕಾರಿ, ಆದರೆ ಯಾಕೆ ಈ ರೀತಿಯ ನಿರ್ಧಾರ ತೆಗೆದುಕೊಂಡರೋ ತಿಳಿಯುತ್ತಿಲ್ಲ ಎಂದು ಪಶ್ಚಿಮ

ಮಂಗಳೂರು/ ಮಡಿಕೇರಿ:  ಡಿವೈಎಸ್ ಪಿ ಗಣಪತಿ ಪ್ರಶಾಂತ ಮನಸ್ಥಿತಿಯ ಅಧಿಕಾರಿ, ಆದರೆ ಯಾಕೆ ಈ ರೀತಿಯ ನಿರ್ಧಾರ ತೆಗೆದುಕೊಂಡರೋ ತಿಳಿಯುತ್ತಿಲ್ಲ ಎಂದು ಪಶ್ಚಿಮ ವಲಯ ಐಜಿಪಿಅರುಣ ಚಕ್ರವರ್ತಿ ಹೇಳಿದ್ದಾರೆ.

ಡಿವೈಎಸ್ ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಅವರು ಅವರು, ತಿಂಗಳ ಹಿಂದೆ ಮಂಗಳೂರು ಡಿವೈಎಸ್ಪಿ ಆಗಿ ಅಧಿಕಾರ ಸ್ವೀಕರಿಸಿದ ಗಣಪತಿ, ಡಿವೈಎಸ್ಪಿ ಮಟ್ಟದ ಅಧಿಕಾರಿ ಐಜಿಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಇಲಾಖೆ ತನಿಖೆ ಕೂಡ ಎದುರಿಸಿದ್ದರು ಎಂದು ಹೇಳಿದ್ದಾರೆ.

ಪ್ರತಿದಿನ ಬೆಳಗ್ಗೆ ನನಗೆ ವಿಶ್ ಮಾಡ್ತಾ ಇದ್ದರು, ಕೆಲಸದ ಬಗ್ಗೆ ನನ್ನ ಜೊತೆ ತುಂಬಾ ಮಾತನಾಡುತ್ತಿದ್ದರು. ದಕ್ಷ ಅಧಿಕಾರಿಯಾಗಿದ್ದ ಅವರು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ, ಅವರ ನಿರ್ದೇಶನದಂತೆ ಕೆಲಸ ನಿರ್ವಹಿಸುತ್ತಿದ್ದರು ಎಂದು ಅರುಣ್ ಚಕ್ರವರ್ತಿ ಹೇಳಿದ್ದಾರೆ.

ಮಂಗಳೂರು ಡಿವೈಎಸ್ ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಪೊಲೀಸ್‌ ಸಮವಸ್ತ್ರದಲ್ಲೇ ಸ್ಥಳೀಯ ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿ, ‘ಮಾಜಿ ಗೃಹ ಸಚಿವ, ಹಾಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಮಂಗಳೂರು ಚರ್ಚ್ ದಾಳಿ ಸಂಬಂಧ ತಮಗೆ ಕಿರುಕುಳ ನೀಡಿದ್ದರು. ರಾಜಕಾರಣಿಗಳು ತಮ್ಮ ಮೇಲೆ ಒತ್ತಡ ಹಾಕುತ್ತಿದ್ದರು ಎಂದು ಆರೋಪಿಸಿದ್ದಾರೆ.

ಗಣಪತಿ ಅವರು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ಕುಶಾಲನಗರ ಸಮೀಪ ರಂಗಸಮುದ್ರದವರಾಗಿದ್ದು, ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಕೊಡಗು ಎಸ್ ಪಿ ರಾಜೇಂದ್ರ ಪ್ರಸಾದ್ ಹೇಳಿದ್ದಾರೆ.

ಹಲವು ವಿವಾದಗಳ ಕೇಂದ್ರ ಬಿಂದು ವಾಗಿದ್ದ ಗಣಪತಿ 2010ರ ಸೆಪ್ಟೆಂಬರ್‌ನಲ್ಲಿ ಯಶವಂತಪುರ ಠಾಣೆ ಇನ್‌ಸ್ಪೆಕ್ಟರ್ ಆಗಿದ್ದಾಗ ಪ್ರಶಾಂತ್ ಅಲಿಯಾಸ್ ಪಚ್ಚಿ ಎಂಬ ರೌಡಿಯ ಮೇಲೆ ಗುಂಡು ಹಾರಿಸಿದ್ದರು. ನಕಲಿ ಎನ್‌ಕೌಂಟರ್ ಎಂದು ಆರೋಪಿಸಲಾಗಿತ್ತು. ಈ ವೇಳೆ ಇಲಾಖಾ ತನಿಖೆ ನಡೆದಿತ್ತು, ನಂತರ ರಾಜಗೋಪಾಲ ನಗರ ಪೊಲೀಸ್ ಠಾಣೆಯಲ್ಲಿದ್ದಾಗ ಕಳ್ಳತನ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ತನಿಖೆಗೆ ಗುರಿಯಾಗಿ ಅಮಾನತಾಗಿದ್ದರು.

ಮಡಿವಾಳ ಠಾಣೆಯ ಇನ್‌ಸ್ಪೆಕ್ಟರ್‌ ಆಗಿದ್ದಾಗ, ಇಲಾಖೆ ಕೊಟ್ಟ ಪಿಸ್ತೂಲನ್ನು ದುರ್ಬಳಕೆ ಮಾಡಿಕೊಂಡ ಆರೋಪಕ್ಕೆ ಗುರಿಯಾದರು. ರಾಜಗೋಪಾಲನಗರ ಠಾಣೆಗೆ ಬಂದ ಅವರು, ಮತ್ತೆ ಕರ್ತವ್ಯ ಲೋಪ ಆರೋಪದಡಿ ಅಮಾನತಾಗಿದ್ದರು. ಮನೆಗಳವು ಪ್ರಕರಣದ ಆರೋಪಿಯಿಂದ ವಶಪಡಿಸಿಕೊಂಡ ಹಣವನ್ನು, ವಾರಸುದಾರರಿಗೆ ನೀಡದೆ ವಂಚಿಸಿದ ಆರೋಪ ಅವರ ಮೇಲಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT