ಮಲ್ಲಿಕಾರ್ಜುನ ಬಂಡೆ ಮತ್ತು ಮಲ್ಲಮ್ಮ 
ರಾಜ್ಯ

ಹುತಾತ್ಮ ಪಿಎಸ್ಐ ಮಲ್ಲಿಕಾರ್ಜುನ ಬಂಡೆ ಪತ್ನಿ ಮಲ್ಲಮ್ಮ ನಿಧನ

ಮೆದುಳು ಕ್ಯಾನ್ಸರ್​ನಿಂದ ಬಳಲುತ್ತಿದ್ದ ಹುತಾತ್ಮ ಪಿಎಸ್ ಐ ಮಲ್ಲಿಕಾರ್ಜುನ ಬಂಡೆ ಅವರ ಪತ್ನಿ ಮಲ್ಲಮ್ಮ ಶನಿವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ...

ಕಲಬುರಗಿ: ಮೆದುಳು ಕ್ಯಾನ್ಸರ್​ನಿಂದ ಬಳಲುತ್ತಿದ್ದ ಹುತಾತ್ಮ ಪಿಎಸ್ ಐ ಮಲ್ಲಿಕಾರ್ಜುನ ಬಂಡೆ ಅವರ ಪತ್ನಿ ಮಲ್ಲಮ್ಮ ಶನಿವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.

ಹಲವು ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಲ್ಲಮ್ಮ (40) ಶನಿವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ತಮ್ಮ ಸಹೋದರಿಯ ಮನೆಯಲ್ಲಿ ಮೃತಪಟ್ಟಿದ್ದಾರೆ. ಮಲ್ಲಮ್ಮ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಲಬುರಗಿಯಲ್ಲಿ 2014ರಲ್ಲಿ ಶಾರ್ಪ್ ಶೂಟರ್ ಮುನ್ನಾನೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗುಂಡು ತಗುಲಿ ಮಲ್ಲಿಕಾರ್ಜುನ ಬಂಡೆ ಮೃತಪಟ್ಟಿದ್ದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮೇಲ್ವಿಚಾರಕಿಯಾಗಿ ಮಲ್ಲಮ್ಮ ಅವರು ಕೆಲಸ ಮಾಡುತ್ತಿದ್ದರು. ಮಲ್ಲಿಕಾರ್ಜುನ ಬಂಡೆ, ಮಲ್ಲಮ್ಮ ದಂಪತಿಗೆ ಶಿವಾನಿ ಮತ್ತು ಸಾಯಿ ಎಂಬ ಇಬ್ಬರು ಮಕ್ಕಳಿದ್ದು, ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ .ಇಂದು ಸಂಜೆ ಮಲ್ಲಮ್ಮ ಅವರ ಅಂತ್ಯಕ್ರಿಯೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಪಕ್ಷಗಳ ಗದ್ದಲದ ನಡುವೆ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಡೆ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ!

ಸಂಸತ್ತಿನಲ್ಲಿ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಚ್ ಕುರಿತು ಮಾತನಾಡಲು ಬಿಜೆಪಿ ಅವಕಾಶ ನೀಡಲಿಲ್ಲ: ಮೈಕ್ ಸ್ವಿಚ್ ಆಫ್ ಆಗಿತ್ತು! ರಾಹುಲ್ ಆರೋಪ

ಕಂಟೆಂಟ್ ಕ್ರಿಯೇಟರ್ ಆಗಲು ₹35 ಲಕ್ಷ ಸಂಬಳದ ಉದ್ಯೋಗ ತೊರೆದ ಟೆಕ್ಕಿ ದಂಪತಿ; ಒಂದೇ ವರ್ಷದಲ್ಲಿ ₹1 ಕೋಟಿಗೂ ಹೆಚ್ಚು ಆದಾಯ!

E20 ಇಂಧನದಿಂದ ವಾಹನಗಳ ಭಾಗಗಳಿಗೆ ಹಾನಿ?: ರಾಜ್ಯಸಭೆಯಲ್ಲಿ ಗಡ್ಕರಿ ಕೊಟ್ರು ಬಿಗ್ ಅಪ್ಡೇಟ್!

ಚಿತ್ರದುರ್ಗ ಜಿಲ್ಲೆಯ ವಿವಿಧೆಡೆ ಬೆಳೆ ಹಾನಿ ಪರಿಶೀಲನೆ: ರೈತರ ಜಮೀನುಗಳಲ್ಲಿ ಸರ್ವೆಗೆ ಇಲ್ಲಿಯವರೆಗೂ ಯಾವುದೇ ಅಧಿಕಾರಿ ಬಂದಿಲ್ಲ- ಆರ್. ಅಶೋಕ್ ಕಿಡಿ!