ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ ಗೋಡೆ ಕುಸಿದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ನಡೆದಿದೆ.
ಮೃತ ವಿದ್ಯಾರ್ಥಿನಿಯರನ್ನು ಲಗಮವ್ವ ಕಟ್ಟೀಮನಿ(11) ಹಾಗೂ ಶ್ವೇತಾ ಕೋಳಿ(11) ಎಂದು ಗುರುತಿಸಲಾಗಿದೆ.
ನಗರದಲ್ಲಿ ಎರಡು ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದ ಪರಿಣಾಮ ಶಾಲಾ ಕಟ್ಟಡ ಶಿಥಿಲಗೊಂಡಿದ್ದು, ಸೋಮವಾರ ಇದ್ದಕ್ಕಿದ್ದಾಗೆ ಕುಸಿದು ಬಿದ್ದಿದೆ. ಪರಿಣಾಮ ಇಬ್ಬರು ಬಾಲಕಿಯರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳು ವಿದ್ಯಾರ್ಥಿನಿಯರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಹುಕ್ಕೇರಿ ತಹಸೀಲ್ದಾರ್ ಸಯೀದಾ ಅಫ್ರೀನಾ ಮತ್ತು ಯಮಕನಮರಡಿ ಪೋಲಿಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics