ಬೆಂಗಳೂರು: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರೆ ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಹೈಕೋರ್ಟ್ ಗೆ ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಲಾಗಿದೆ.
ವಕೀಲ ರಂಗನಾಥ್ ರೆಡ್ಡಿ ಎಂಬುವವರು ಕೆ.ಜೆ.ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರೊಣವ್ ಮೊಹಂತಿ ಹಾಗೂ ಎ.ಎಂ.ಪ್ರಸಾದ್ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಪಿಐಎಲ್ ಸಲ್ಲಿಸಿದ್ದಾರೆ.
ಗಣಪತಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಈ ಮೂವರ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆಗೆ ನಿರ್ದೇಶನ ನೀಡಬೇಕು ಎಂದು ರೆಡ್ಡಿ ಮನವಿ ಮಾಡಿದ್ದಾರೆ.