ಬೆಂಗಳೂರು: ಎಸ್ ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು, 45 ಸಾವಿರದ 667 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಇಂದು ಎಲ್ಲಾ ಪ್ರೌಢ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ.
ನಿನ್ನೆ ಪ್ರೌಢ ಶಿಕ್ಷಣ ಇಲಾಖೆಯ ವೆಬ್ ಸೈಟ್ ಗಳಲ್ಲಿ ಫಲಿತಾಂಶ ಲಭ್ಯವಾಗಿತ್ತು.
ಜೂನ್ ನಲ್ಲಿ ನಡೆದಿದ್ದ ಪೂರಕ ಪರೀಕ್ಷೆಯಲ್ಲಿ 1 ಲಕ್ಷದ 75 ಸಾವಿರದ 187 ವಿದ್ಯಾರ್ಥಿಗಳು ಹಾಜರಾಗಿದ್ದರು.ಅವರಲ್ಲಿ 45 ಸಾವಿರದಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ಯಶೋದಾ ಬೋಪಣ್ಣ ತಿಳಿಸಿದ್ದಾರೆ.
ವಾರ್ಷಿಕ ಪರೀಕ್ಷೆಗೆ ಹೋಲಿಸಿದರೆ ಪೂರಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರ ಪ್ರಮಾಣ ಕಡಿಮೆ. ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಅಥವಾ ಛಾಯಾ ಪ್ರತಿಗಾಗಿ ಇದೇ 23ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದರು.