ಡಿವೈಎಸ್ಪಿ ಗಣಪತಿ 
ರಾಜ್ಯ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ನ್ಯಾ.ಕೆ.ಎನ್. ಕೇಶವನಾರಾಯಣ ನೇತೃತ್ವದಲ್ಲಿ ತನಿಖೆ

ಸಾಕಷ್ಟು ವಿರೋಧಗಳ ನಡುವೆಯೂ ರಾಜ್ಯ ಸರ್ಕಾರ ಡಿವೈಎಸ್ಪಿ ಗಣಪತಿಯವರ ಆತ್ಮಹತ್ಯೆ ಪ್ರಕರಣವನ್ನು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎನ್. ಕೇಶವನಾರಾಯಣ ಅವರ...

ಬೆಂಗಳೂರು: ಸಾಕಷ್ಟು ವಿರೋಧಗಳ ನಡುವೆಯೂ ರಾಜ್ಯ ಸರ್ಕಾರ ಡಿವೈಎಸ್ಪಿ ಗಣಪತಿಯವರ ಆತ್ಮಹತ್ಯೆ ಪ್ರಕರಣವನ್ನು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎನ್. ಕೇಶವನಾರಾಯಣ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ.

ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿದ್ದ ರಾಜ್ಯ ಸರ್ಕಾರ ಗಣಪತಿಯವರ ಆತ್ಮಹತ್ಯೆ ಪ್ರಕರಣವನ್ನು ಇತ್ತೀಚೆಗಷ್ಟೇ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು.

ಇದರಂತೆ ತನಿಖೆಗೆ ನ್ಯಾ.ಕೇಶವನಾರಾಯಣ ಅವರ ಏಕಸದಸ್ಯ ಆಯೋಗ ರಚಿಸಿ ಆದೇಶ ಹೊರಡಿಸಿದ್ದು, ವಿಚಾರಣೆಗೆ ಆರು ತಿಂಗಳ ಕಾಲಾವಕಾಶವನ್ನು ನೀಡಿದೆ. ಅಲ್ಲದೆ, ವಿಚಾರಣಾ ಆಯೋಗದ ಕಾಯ್ದೆಯಂತೆ ಇರುವ ಅಧಿಕಾರ ಬಳಸಿ ವಿಚಾರಣೆ ನಡೆಸಿ, ವರದಿಯನ್ನು ಸಲ್ಲಿಸುವಂತೆ ಆಯೋಗಕ್ಕೆ ಸರ್ಕಾರ ಸೂಚನೆ ನೀಡಿದೆ.

ವಿಚಾರಣೆ ಆಯೋಗಕ್ಕೆ ನಗರದಲ್ಲಿ ಕಚೇರಿ ವ್ಯವಸ್ಥೆ ಕಲ್ಸಿಸುವುದಾಗಿ ರಾಜ್ಯ ಸರ್ಕಾರ ಹೇಳಿದ್ದು, ಆಡಳಿತ ವಿಭಾಗವು ಆಯೋಗಕ್ಕೆ ಬೇಕಾದ ಕಚೇರಿ, ಸಿಬ್ಬಂದಿ ಸೇರಿದಂತೆ ತನಿಖೆಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕೆಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್