ಬೆಂಗಳೂರು: ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ರಾಜ್ಯ ಸಮಿತಿ ಸದಸ್ಯನೊಬ್ಬನನ್ನು ಸಿಐಡಿ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.
ಪ್ರದೀಪ್ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನು ಕಲ್ಲಪ್ಪ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಎನ್ನಲಾಗಿರುವ ಪ್ರವೀಣ್ ಕಾಂಡ್ಯ ಸಹಚರನಾಗಿದ್ದಾನೆಂದು ತಿಳಿದುಬಂದಿದೆ.
ಬಂಧಿತ ಆರೋಪಿ ಪ್ರದೀಪ್ ಕೂಡ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿದ್ದು, ಶೀಘ್ರದಲ್ಲೇ ಚಿಕ್ಕಮಗಳೂರಿನ ಜಿಲ್ಲಾ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, 10 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಧೀಶರ ಬಳಿ ಮನವಿ ಮಾಡಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಮೊದಲ ಆರೋಪಿಯನ್ನು ಬಂಧಿಸಿದ್ದಾರೆ. ಪ್ರವೀಣ್ ಕಾಂಡ್ಯ ಮತ್ತು ಆತನ ಸಹಚರರ ಬಂಧನಕ್ಕಾಗಿ ಅಧಿಕಾರಿಗಳು ತಂಡವೊಂದನ್ನು ನೇಮಿಸಿದ್ದಾರೆ ಎಂದು ಅವರು ಹೇಳಿದ್ದಾರೆ.