ಸಂಸದ ಬಿ.ಎಸ್.ಯಡಿಯೂರಪ್ಪ (ಸಂಗ್ರಹ) 
ರಾಜ್ಯ

ಗಣಪತಿ ಆತ್ಮಹತ್ಯೆ ಪ್ರಕರಣ ಸಂಸತ್ತಿನಲ್ಲಿ ಪ್ರಸ್ತಾಪ: ಸಂಸದ ಯಡಿಯೂರಪ್ಪ

ಸೋಮವಾರದಿಂದ ಆರಂಭಗೊಂಡಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ರಾಜ್ಯದ ಡಿವೈಎಸ್ಪಿ ಎಂ.ಕೆ.ಗಣಪತಿ...

ಬೆಂಗಳೂರು: ಸೋಮವಾರದಿಂದ ಆರಂಭಗೊಂಡಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ರಾಜ್ಯದ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಪ್ರಸ್ತಾಪವಾಗಲಿದೆ.
ಸಂಸತ್‌ ಅಧಿವೇಶನದಲ್ಲಿ ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತು ಚರ್ಚಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಪತಿ ಆತ್ಮಹತ್ಯೆ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ತನ್ನ ಹೋರಾಟ ತೀವ್ರಗೊಳಿಸಲಿದೆ. ಸಂಸತ್ತಿನಲ್ಲಿ ಈ ವಿಷಯ ಮಂಡನೆಗೆ ಅವಕಾಶ ಕೋರುವ ಸಂಬಂಧ ಕೇಂದ್ರ ಸಚಿವರಾದ ಅನಂತಕುಮಾರ್‌ ಮತ್ತು ಸದಾನಂದಗೌಡ ಅವರೊಂದಿಗೆ ಸಮಾಲೋಚನೆ ನಡೆಸಿದ್ದೇನೆ. ಲೋಕಸಭೆಯ ಸ್ಪೀಕರ್‌ ಜತೆ ಮಾತನಾಡಿ ಪ್ರಸ್ತಾಪಕ್ಕೆ ಅನುಮತಿ ಕೋರಲಾಗುವುದು ಎಂದರು.
ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂಬುದರ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರೊಂದಿಗೂ ಮನವಿ ಮಾಡಲಾಗುವುದು. ಅಲ್ಲದೆ, ಈ ವಿಷಯದಲ್ಲಿ ಮಧ್ಯೆ ಪ್ರವೇಶಿಸುವಂತೆ ಕೋರಿ ಶೀಘ್ರದಲ್ಲೇ ರಾಜ್ಯಪಾಲರಿಗೂ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!