ಆಲೆಖಾನ್ ಜಲಪಾತ (ಸಂಗ್ರಹ ಚಿತ್ರ) 
ರಾಜ್ಯ

ಸೆಲ್ಫೀ ಗೀಳಿಗೆ ರಾಜ್ಯದಲ್ಲಿ ಇಬ್ಬರು ಬಲಿ

ಸೆಲ್ಫೀ ಗೀಳಿಗೆ ರಾಜ್ಯದಲ್ಲಿ ಇಬ್ಬರು ವ್ಯಕ್ತಿಗಳು ಬಲಿಯಾಗಿರುವ ಘಟನೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿರುವ ಆಲೆಖಾನ್ ಜಲಪಾತದಲ್ಲಿ ಸೋಮವಾರ ನಡೆದಿದೆ...

ಚಿಕ್ಕಮಗಳೂರು: ಸೆಲ್ಫೀ ಗೀಳಿಗೆ ರಾಜ್ಯದಲ್ಲಿ ಇಬ್ಬರು ವ್ಯಕ್ತಿಗಳು ಬಲಿಯಾಗಿರುವ ಘಟನೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿರುವ ಆಲೆಖಾನ್ ಜಲಪಾತದಲ್ಲಿ ಸೋಮವಾರ ನಡೆದಿದೆ.

ಹನುಮಂತಪ್ಪ (34), ನಾಗಭೂಷಣ್ (98) ಮೃತಪಟ್ಟವರಾಗಿದ್ದಾರೆ. ಬಸವರಾಜ್, ನಾಗೇಶ್ ಹಾಗೂ ಹೊನ್ನೇಶ್, ಸ್ನೇಹಿತರ ಗುಂಪೊಂದು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ದರ್ಶನಕ್ಕೆಂದು ಶನಿವಾರ ತುರನೂರು ಗ್ರಾಮದಿಂದ ಕಾರಿನಲ್ಲಿ ಹೊರಟಿದ್ದರು. ದೇವರ ದರ್ಶನ ಮುಗಿಸಿ ಬೆಳಗ್ಗೆ ಧರ್ಮಸ್ಥಳದಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ ಚಿಕ್ಕಮಗಳೂರು ಕಡೆಗೆ ಬರುವಾಗ ಮೂಡಿಗೆರೆಯಿಂದ ಸುಮಾರು 25 ಕಿ.ಮೀ ದೂರದ ಆಲೆಖಾನ್ ಜಲಪಾತ ನೋಡಲು ಇಳಿದಿದ್ದಾರೆ.

ಈ ವೇಳೆ ಹನುಮಂತಪ್ಪ ಹಾಗೂ ನಾಗಭೂಷಣ್ ಸೆಲ್ಫೀ ತೆಗೆಯುವಾಗ ನಿಯಂತ್ರಣ ಕಳೆದುಕೊಂಡು ಪ್ರಪಾತಕ್ಕೆ ಬಿದ್ದಿದ್ದಾರೆ. ಇಬ್ಬರ ಮೃತದೇಹಗಳನ್ನು ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದ ವೇಳೆ ಸ್ಥಳೀಯರು ಪೊಲೀಸರಿಗೆ ನೆರವಾಗಿದ್ದಾರೆ. ಕೊಟ್ಟಿಗೆಹಾರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!