ಮಡಿಕೇರಿ: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿಗಳಾದ ಪ್ರೊಣವ್ ಮೊಹಂತಿ ಮತ್ತು ಎ.ಎಂ.ಪ್ರಸಾದ್ ಅವರ ವಿರುದ್ಧ ಕೊನೆಗೂ ಮಡಿಕೇರಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ನಿನ್ನೆಯಷ್ಟೇ ಮಡಿಕೇರಿ ಜೆಎಂಎಫ್ ಸಿ ಕೋರ್ಟ್ ಗಣಪತಿ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಮಡಿಕೇರಿ ನಗರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಕೆ.ಜೆ.ಜಾರ್ಜ್ ಮೊದಲ ಆರೋಪಿಯಾಗಿ ಹಾಗೂ ಪ್ರೊಣವ್ ಮೊಹಂತಿ ಎರಡನೇ ಆರೋಪಿಯಾಗಿ ಮತ್ತು ಎ.ಎಂ.ಪ್ರಸಾದ್ ಮೂರನೇ ಆರೋಪಿಯನ್ನಾಗಿ ಮಾಡಲಾಗಿದೆ.
ಈ ಮಧ್ಯೆ ಜೆಎಂಎಫ್ ಸಿ ಕೋರ್ಟ್ ನೀಡಿದ್ದ ಆದೇಶಕ್ಕೆ ಮಧ್ಯಂತರ ತಡೆ ಕೋರಿ ಪ್ರೊಣವ್ ಮೊಹಂತಿ ಹಾಗೂ ಎ.ಎಂ.ಪ್ರಸಾದ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರ್ಟ್ ಆದೇಶಿಸುತ್ತಿದ್ದಂತೆ ಕೆ.ಜೆ.ಜಾರ್ಜ್ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.