ಕಲ್ಲಪ್ಪ ಹಂಡಿಭಾಗ್ 
ರಾಜ್ಯ

ಡಿವೈಎಸ್ಪಿ ಕಲ್ಲಪ್ಪ ಆತ್ಮಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅಭಿರಾಮ್ ಬಂಧನ

ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಭಿ ಅಲಿಯಾಸ್...

ಬೆಂಗಳೂರು: ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಭಿ ಅಲಿಯಾಸ್ ಅಭಿರಾಮ್ ನನ್ನು ಸಿಐಡಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಸಿಐಡಿ ಅಧಿಕಾರಿಗಳ ಪ್ರಕಾರ, ಅಭಿರಾಮ್ ಒಬ್ಬ ವಿದ್ಯಾರ್ಥಿಯಾಗಿದ್ದು, ತೇಜಸ್ ಗೌಡ ಅಪಹರಣ ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದ್ದಾನೆ ಎನ್ನಲಾಗಿದೆ. ಪ್ರಕರಣ ಸಂಬಂಧ ಈ ಮುಂಚೆ ಅಪಹರಣಕ್ಕೆ ಸಹಕರಿಸಿದ ಆರೋಪದ ಮೇಲೆ ರಾಜ್ಯ ಬಜರಂಗದಳದ ಸದಸ್ಯ ಪ್ರದೀಪ್ ನನ್ನು ಬಂಧಿಸಲಾಗಿತ್ತು.
ಪ್ರಕರಣದ ಇತರೆ ಪ್ರಮುಖ ಆರೋಪಿಗಳಾದ ಪ್ರವೀಣ್ ಖಾಂಡ್ಯ ಹಾಗೂ ನವೀನ್ ಶೆಟ್ಟಿಯ ಬಂಧನಕ್ಕಾಗಿ ತೀವ್ರ ಶೋಧ ನಡೆಸುತ್ತಿದ್ದು, ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ ನೀಡುವುದಾಗಿ ಸಹ ಸಿಐಡಿ ಘೋಷಿಸಿದೆ.
ತೇಜಸ್‌ ಗೌಡನ ಅಪಹರಣ ಹಾಗೂ ಆನಂತರದ ಬೆಳವಣಿಗೆಗಳನ್ನು ಅವಲೋಕಿಸಿದಾಗ ಪ್ರವೀಣ್‌ ಖಾಂಡ್ಯ ಈ ಹಿಂದೆ ಸಹ ಮಲೆನಾಡಿನ ವ್ಯಾಪಾರಿಗಳು, ಫೈನಾನ್ಷಿಯರ್‌ಗಳು ಸೇರಿದಂತೆ ಸಿರಿವಂತರನ್ನು ಬೆದರಿಸಿ ಹಣ ಸುಲಿಗೆ ಮಾಡಿರುವ ಅನುಮಾನಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!