ಹಿರಿಯ ಕಾಂಗ್ರೆಸ್ ನಾಯಕ ಎಫ್.ಎಂ ಖಾನ್ ನಿಧನ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರಾಜ್ಯಸಭಾ ಸದಸ್ಯ ಎಫ್. ಎಂ ಖಾನ್ ಅವರು ಗುರುವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ...
ಮಡಿಕೇರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರಾಜ್ಯಸಭಾ ಸದಸ್ಯ ಎಫ್. ಎಂ ಖಾನ್ ಅವರು ಗುರುವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಎಂಎಫ್ ಖಾನ್ ಅವರಿಗೆ 84 ವರ್ಷ ಪ್ರಾಯವಾಗಿತ್ತು. ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿದ್ದ ಖಾನ್ ಅವರು ಎಐಸಿಸಿ ಖಜಾಂಚಿಯಾಗಿಯೂ ಕಾರ್ಯನಿರ್ವಹಿಸಿದ್ದರು.
ಪುಷ್ಪ ಪ್ರೇಮಿಯಾಗಿದ್ದ ಖಾನ್ ಅವರು ಪ್ರತಿವರ್ಷ ಫಲ ಪುಷ್ಪ ಮೇಳ ನಡೆಸಿ ಜಾಗ್ರತಿ ಮೂಡಿಸುತ್ತಿದ್ದರು.
ಖಾನ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.