ಸಾಂದರ್ಭಿಕ ಚಿತ್ರ 
ರಾಜ್ಯ

ಸನ್ನಡತೆ ಆಧಾರದ ಮೇಲೆ ಕೈದಿಗಳ ಅವಧಿಪೂರ್ವ ಬಿಡುಗಡೆ: ಸರ್ಕಾರದ ಹೊಸ ನಿಯಮ

ಸನ್ನಡತೆ ಆಧಾರದ ಮೇಲೆ ಕೈದಿಗಳ ಬಿಡುಗಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೊನೆಗೂ ಪರಿಷ್ಕೃತ ಮಾರ್ಗಸೂಚಿ ರೂಪಿಸಿದ್ದು, ಆಗಸ್ಟ್‌ 15ರ ಸ್ವಾತಂತ್ರ್ಯ..

ಬೆಂಗಳೂರು: ಸನ್ನಡತೆ ಆಧಾರದ ಮೇಲೆ ಕೈದಿಗಳ ಬಿಡುಗಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೊನೆಗೂ ಪರಿಷ್ಕೃತ ಮಾರ್ಗಸೂಚಿ ರೂಪಿಸಿದ್ದು, ಆಗಸ್ಟ್‌ 15ರ ಸ್ವಾತಂತ್ರ್ಯ ದಿನಾಚರಣೆಯಂದು ಹೊಸ ಮಾರ್ಗಸೂಚಿ ಪ್ರಕಾರ ಕೈದಿಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಿದೆ.

ಹೊಸ ಮಾರ್ಗಸೂಚಿಯ ಅನುಸಾರ, ಕೇಂದ್ರ ಸರ್ಕಾರದ ಕಾನೂನುಗಳ ಅನ್ವಯ ಹಾಗೂ ಸಿಬಿಐ, ಎನ್‌ಐಎ ತನಿಖೆಯಲ್ಲಿ ಶಿಕ್ಷೆಗೊಳಗಾದ ಕೈದಿಗಳ ಜೊತೆಗೆ ಭಯೋತ್ಪಾದನೆ, ರಾಜದ್ರೋಹ, ಎರಡಕ್ಕಿಂತ ಮೂರು ಕೊಲೆ ಪ್ರಕರಣಗಳಲ್ಲಿ ಅಪರಾಧಿಯಾದವರು, ಶಸ್ತ್ರಸಜ್ಜಿತ ದರೋಡೆಕೋರರು, ಸುಪಾರಿ ಕೊಲೆಗಾರರು, ಕಳ್ಳಸಾಗಣೆ ದಾರರು, ಮಾದಕ ದ್ರವ್ಯ ಸಾಗಣೆ ಮತ್ತು ಮಾರಾಟ ಕೃತ್ಯಗಳ ಅಪರಾಧಿಗಳು, ಅತ್ಯಾಚಾರ, ದರೋಡೆ, ಕೊಲೆ ಹಾಗೂ ಜೈಲು ಸಿಬ್ಬಂದಿ ಕೊಲೆ ಅಪರಾಧಿಗಳನ್ನು ವ್ಯಾಪ್ತಿಯಿಂದ ಹೊರಗಿಡಲಾಗಿದೆ.

ಸಿಆರ್‌ಪಿಸಿ (ದಂಡ ಪ್ರಕ್ರಿಯಾ ಸಂಹಿತೆ) ಕಲಂ 433 ಎ ಅನುಸಾರ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳು 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದರೆ ಮಾತ್ರ ಅವರಿಗೆ ಹೊಸ ಮಾರ್ಗಸೂಚಿ ಅನ್ವಯವಾಗುತ್ತದೆ.

ಜೀವಾವಾಧಿ ಶಿಕ್ಷೆಗೆ ಒಳಪಟ್ಟಿರುವ ಪುರುಷ ಕೈದಿಯು ತನ್ನ ಶಿಕ್ಷಾ ಅವಧಿಯಲ್ಲಿ ಯಾವುದೇ ಕಡಿತವಿಲ್ಲದೆ 10 ವರ್ಷ ಜೈಲು ಶಿಕ್ಷೆ ಪೂರೈಸಿದ್ದು 65 ವರ್ಷ ದಾಟಿದ್ದರೆ, ಇದೇ ರೀತಿಯಲ್ಲಿ  ಏಳು ವರ್ಷ ಸತತವಾಗಿ ಶಿಕ್ಷೆಗೊಳಗಾದ 60 ವರ್ಷ ದಾಟಿದ ಮಹಿಳಾ ಕೈದಿಗಳು ವಿನಾಯ್ತಿಗೆ ಒಳಪಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT