ನಿತ್ಯಾನಂದ ಸ್ವಾಮಿ 
ರಾಜ್ಯ

ದೇವಮಾನವ ನಿತ್ಯಾನಂದನಿಗೆ ಸದ್ಯಕ್ಕೆ ರಿಲೀಫ್

ಬಿಡದಿ ಧ್ಯಾನ ಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧದ ಅತ್ಯಾಚಾರ ಮತ್ತು ರಾಸಲೀಲೆ ಪ್ರಕರಣದ ಸಾಕ್ಷಿಗಳನ್ನು ಹಾಜರುಪಡಿಸಲು ಕರ್ನಾಟಕ ಹೈಕೋರ್ಟ್ ಆದೇಶ ..

ಬೆಂಗಳೂರು: ಬಿಡದಿ ಧ್ಯಾನ ಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧದ ಅತ್ಯಾಚಾರ ಮತ್ತು ರಾಸಲೀಲೆ ಪ್ರಕರಣದ ಸಾಕ್ಷಿಗಳನ್ನು ಹಾಜರುಪಡಿಸಲು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಸಾಕ್ಷಿಗಳನ್ನು ಹಾಜರುಪಡಿಸಲು ಸೂಚನೆ ನೀಡಬೇಕು ಎಂದು ನಿತ್ಯಾನಂದ ಸ್ವಾಮೀಜಿ ಕೋರ್ಟ್ ಮೆಟ್ಟಿಲೇರಿದ್ದರು.

ಬಿಡದಿ ಧ್ಯಾನಪೀಠ ಆಶ್ರಮದ ಭಕ್ತೆ ಆರತಿ ರಾವ್‌ ಮೇಲಿನ ಅತ್ಯಾಚಾರ ಪ್ರಕರಣದಲ್ಲಿನ ಸಾಕ್ಷಿಗಳ ಹೇಳಿಕೆ, ನಿತ್ಯಾನಂದ ಸ್ವಾಮೀಜಿ ಮತ್ತು ಸಂತ್ರಸ್ತೆಯ ವೈದ್ಯಕೀಯ ದಾಖಲೆಗಳನ್ನು ತನಿಖಾಧಿಕಾರಿಯಿಂದ ಪಡೆದು ಸುರಕ್ಷಿತವಾಗಿಡುವಂತೆ ರಾಮನಗರ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ನಟಿ ರಂಜಿತಾ ಪ್ರಕರಣ ಸಂಬಂಧ ದಾಖಲಿಸಿರುವ 33 ಸಾಕ್ಷಿಗಳ ಹೇಳಿಕೆ, ನಿತ್ಯಾನಂದ ಸ್ವಾಮೀಜಿ ಮತ್ತು ಸಂತ್ರಸ್ತೆ ಆರತಿರಾವ್‌ ವೈದ್ಯಕೀಯ ದಾಖಲೆ ಮತ್ತು ಆರತಿರಾವ್‌ ಅವರು ಅಮೆರಿಕದ ತನ್ನ ಸ್ನೇಹಿತ ಭಾರದ್ವಾಜ್‌ಗೆ ಕಳುಹಿಸಿರುವ ಇ-ಮೇಲ್‌ ಸಂದೇಶದ ವಿವರ ಸಲ್ಲಿಸುವಂತೆ ತನಿಖಾಧಿಕಾರಿಗೆ ಸಮನ್ಸ್‌ ಜಾರಿ ಮಾಡಿ ದಾಖಲೆಗಳನ್ನು ಪಡೆದುಕೊಳ್ಳಬೇಕು. ತನಿಖಾಧಿಕಾರಿಗಳು ಸಲ್ಲಿಸುವ ದಾಖಲೆಗಳನ್ನು ಸುರಕ್ಷಿತವಾಗಿಡಬೇಕು ಎಂದು ಅಧೀನ ನ್ಯಾಯಾಲಯಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಪ್ರಕರಣದ ಕುರಿತು ದಾಖಲಾಗಿರುವ ಸಾಕ್ಷಿಗಳ ಹೇಳಿಕೆ ಹಾಗೂ ವೈದ್ಯಕೀಯ ವರದಿ ನೀಡಲು ನಿರಾಕರಿಸಿದ್ದ ತನಿಖಾಧಿಕಾರಿ ಮತ್ತು ಅಧೀನ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಬಿಡದಿ ಆಶ್ರಮ ಅನುಯಾಯಿ ನಿತ್ಯಾಭಕ್ತಾನಂದ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಚ್‌.ಬಿಳ್ಳಪ್ಪ ಅವರಿದ್ದ ಏಕಸದಸ್ಯ ಪೀಠ ಈ ನಿರ್ದೇಶನ ನೀಡಿ, ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಆರತಿರಾವ್‌ ಮೇಲಿನ ನಿತ್ಯಾನಂದ ಸ್ವಾಮೀಜಿ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ 48 ಸಾಕ್ಷಿಗಳನ್ನು ಗುರುತಿಸಿ, 33 ಮಂದಿಯಿಂದ ಪಡೆದ ಹೇಳಿಕೆ, ಬೌರಿಂಗ್‌ ಆಸ್ಪತ್ರೆಯಲ್ಲಿ ನಿತ್ಯಾನಂದ ಸ್ವಾಮೀಜಿಗೆ ನಡೆಸಿದ ವೈದ್ಯಕೀಯ ಪರೀಕ್ಷೆಯ ದಾಖಲೆಗಳನ್ನು ಸಿಐಡಿ ತನಿಖಾಧಿಕಾರಿಗಳು ಸಂಗ್ರಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!