ಸಾಂದರ್ಭಿಕ ಚಿತ್ರ 
ರಾಜ್ಯ

ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ: ಸಾರಿಗೆ ನೌಕರರ ವೇತನ ಶೇಕಡಾ 12.5ಕ್ಕೆ ಹೆಚ್ಚಳಕ್ಕೆ ಸರ್ಕಾರ ಪ್ರಸ್ತಾಪ?

ಸಾರಿಗೆ ಸಂಸ್ಥೆ ನೌಕರರ ಮುಷ್ಕರ ಇಂದು ಕೂಡ ಮುಂದುವರಿದಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ...

ಬೆಂಗಳೂರು: ಸಾರಿಗೆ ಸಂಸ್ಥೆ ನೌಕರರ ಮುಷ್ಕರ ಇಂದು ಕೂಡ ಮುಂದುವರಿದಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಮುಷ್ಕರ ಕೈಬಿಡಲು ಪರಿಹಾರ ಕಂಡುಕೊಳ್ಳುವ ಸಾಧ್ಯತೆಯಿದೆ.
ನೌಕರರ ವೇತನವನ್ನು ಶೇಕಡಾ 35ರಷ್ಟು ಹೆಚ್ಚಿಸಬೇಕು ಎಂಬುದು ನೌಕರರ ಬೇಡಿಕೆಯಾಗಿದೆ. ಆದರೆ ಸರ್ಕಾರ ಶೇಕಡಾ 10ರಷ್ಟು ವೇತನ ಹೆಚ್ಚಿಸಲು ಈಗಾಗಲೇ ಸಿದ್ಧವಿದೆ. ನೌಕರರು ಇನ್ನೂ ತಮ್ಮ ಪಟ್ಟು ಮುಂದುವರಿಸಿದರೆ ಸರ್ಕಾರ ಶೇಕಡಾ 12.5ಕ್ಕೆ ವೇತನ ಹೆಚ್ಚಿಸುವ ಪ್ರಸ್ತಾಪ ಮುಂದಿಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದ್ದು, ಮುಷ್ಕರ ನಿರತ ನೌಕರರ ಮನವೊಲಿಸಿ ಅವರು ಮತ್ತೆ ಕೆಲಸಕ್ಕೆ ಹಾಜರಾಗುವಂತೆ ಮನವೊಲಿಸುವ ಪ್ರಯತ್ನ ಮಾಡುವ ಸಾಧ್ಯತೆಯಿದೆ ಸರ್ಕಾರ.
ಎಸ್ಮಾ ಕಾಯ್ದೆ ಜಾರಿಗೆ ತಂದರೆ, ನೌಕರರು ಕರ್ತವ್ಯಕ್ಕೆ ಹಾಜರಾಗಲು ನಿರಾಕರಿಸಿದರೆ ಅವರ ವಿರುದ್ಧ ಜಾಮೀನುರಹಿತ ಕೇಸು ದಾಖಲಿಸಲು ಅವಕಾಶವಿದೆ. ನೌಕರರು ಬಂಧನಕ್ಕೊಳಗಾದರೆ ಒಂದು ವರ್ಷದವರೆಗೆ ಜೈಲು ಮತ್ತು 5 ಸಾವಿರ ರೂಪಾಯಿ ದಂಡ ಅಥವಾ ಎರಡೂ ಶಿಕ್ಷೆ ಅನುಭವಿಸಬೇಕಾಗಬಹುದು.
ರಾಜ್ಯದ 1.25 ಲಕ್ಷ ಮುಷ್ಕರನಿರತ ಸಾರಿಗೆ ನೌಕರರ ಬೇಡಿಕೆಗಳನ್ನು ಮುಕ್ತವಾಗಿ ಆಲಿಸಲು ಸಿದ್ಧರಿರುವುದಾಗಿ ಸಿದ್ದರಾಮಯ್ಯ ಮತ್ತು ರಾಮಲಿಂಗಾ ರೆಡ್ಡಿ ಸೂಚನೆ ನಿನ್ನೆ ಮಧ್ಯಾಹ್ನದ ವೇಳೆಗೆ ನೀಡಿದ್ದರು.ಆದರೆ ನಿನ್ನೆ ಸಾಯಂಕಾಲ ಹೇಳಿಕೆ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಮೊದಲು ಮುಷ್ಕರ ಬಿಡಿ, ನಂತರ ಮಾತುಕತೆಗೆ ಬನ್ನಿ ಎಂದು ಹೇಳಿದರು.
'' ಸರ್ಕಾರ ನೌಕರರ ವೇತನವನ್ನು ಶೇಕಡಾ 8ರಿಂದ 10ಕ್ಕೆ ಹೆಚ್ಚಿಸಲು ಸಿದ್ಧವಿದೆ. ಅದಕ್ಕಿಂತ ಹೆಚ್ಚು ನೀಡಲು ಸಾಧ್ಯವಿಲ್ಲ. ಈಗಾಗಲೇ ಸಾರಿಗೆ ಇಲಾಖೆಯ ಶೇಕಡಾ 45ರಿಂದ 50ರಷ್ಟು ಆದಾಯ ನೌಕರರ ವೇತನಕ್ಕೆ ಹೋಗುತ್ತದೆ. ಶೇಕಡಾ 12.5ರಷ್ಟು ಹೆಚ್ಚಿಸಿದರೆ ರಾಜ್ಯದ ಖಜಾನೆಗೆ ಮತ್ತಷ್ಟು ನಷ್ಟವುಂಟಾಗುತ್ತದೆ ಎಂದು ರಾಮಲಿಂಗಾ ರೆಡ್ಡಿ ಹೇಳಿದರು.
ಇಂದು ಸರ್ಕಾರ ಏನು ನಿರ್ಧಾರ ಕೈಗೊಳ್ಳುತ್ತದೆ ಎಂಬುದರ ಮೇಲೆ ನಾಳೆ ಮುಷ್ಕರ ಮುಂದುವರಿಯುತ್ತದೆಯೇ, ಇಲ್ಲವೇ ಎಂಬುದು ತೀರ್ಮಾನವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ