ಬೆಂಗಳೂರು: ಸಾಮಾನ್ಯವಾಗಿ ಪ್ರತಿವರ್ಷ ಜುಲೈ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ಸಾಮಾನ್ಯವಾಗಿರುತ್ತದೆ. ಆದರೆ ಈ ವರ್ಷ ಪರಿಸ್ಥಿತಿ ಹಾಗಿಲ್ಲ.
ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಟ್ರಾಫಿಕ್ ಜಾಮ್ ಮಾತ್ರವಲ್ಲದೆ ಅನೇಕ ಕಡೆ ಮರಗಳು ಧರೆಗುರುಳಿವೆ. ಕಟ್ಟಡಗಳು ಹಾನಿಗೀಡಾಗಿವೆ. ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಇನ್ನು ಹಲವೆಡೆ ಅಪಾರ್ಟ್ ಮೆಂಟ್ ಗಳ ಬೇಸ್ ವರೆಗೆ ನೀರು ನುಗ್ಗಿದೆ.
ಕಳೆದ ಏಳು ವರ್ಷಗಳಲ್ಲಿ ಜುಲೈ ತಿಂಗಳಲ್ಲಿ ಬಿದ್ದ ಮಳೆ ಈ ವರ್ಷವಾಗಿದೆ. ಇದುವರೆಗೆ ಈ ತಿಂಗಳು ಬೆಂಗಳೂರಿನಲ್ಲಿ 156.7 ಮಿಲಿ ಮೀಟರ್ ಮಳೆ ಸುರಿದಿದ್ದು, ಇನ್ನೆರಡು ದಿನಗಳಿರುವುದರಿಂದ 200 ಮಿಲಿ ಮೀಟರ್ ಮೀರುವ ಸಾಧ್ಯತೆಯಿದೆ.
ಮುಂದಿನ 48 ಗಂಟೆ ಬೆಂಗಳೂರಿನಲ್ಲಿ ಇನ್ನೂ ಹೆಚ್ಚು ಮಳೆ ಸುರಿಯುವ ನಿರೀಕ್ಷೆಯಿದೆ.