ರಾಜಭವನದಲ್ಲಿ ಕರವೇ ಪ್ರತಿಭಟನಾ (ಸಂಗ್ರಹ ಚಿತ್ರ) 
ರಾಜ್ಯ

ರಾಜಭವನಕ್ಕೆ ಕರವೇ ಮುತ್ತಿಗೆ; ಪೊಲೀಸರಿಂದ ಕಾರ್ಯಕರ್ತರ ಬಂಧನ

ಮಹದಾಯಿ ತೀರ್ಪು ವಿರೋಧಿಸಿ ಕನ್ನಡಪರ ಹೋರಾಟಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಶನಿವಾರ ಬೆಳಗ್ಗೆ ಪ್ರತಿಭಟನಾನಿರತರು ರಾಜಭವನಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ.

ಬೆಂಗಳೂರು: ಮಹದಾಯಿ ತೀರ್ಪು ವಿರೋಧಿಸಿ ಕನ್ನಡಪರ ಹೋರಾಟಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಶನಿವಾರ ಬೆಳಗ್ಗೆ ಪ್ರತಿಭಟನಾನಿರತರು ರಾಜಭವನಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ.

ಈ ವೇಳೆ ರಾಜಭವನದ ಬಳಿ ದೊಡ್ಡ ಹೈ ಡ್ರಾಮವೇ ನಡೆದಿದ್ದು, ಅಪಾರ ಪ್ರಮಾಣದ ಕರವೇ ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದೇ ಸಂದರ್ಭದಲ್ಲಿ  ರಾಜ್ಯಪಾಲ ವಜುಭಾಯಿ ವಾಲಾ ಅವರು ಹೊರಗೆ ತೆರಳುತ್ತಿದ್ದರು. ಇದನ್ನೇ ಕಾಯುತ್ತಿದ್ದ ಕಾರ್ಯಕರ್ತರು ರಾಜ್ಯಪಾಲರನ್ನು ತಡೆಯಲೆತ್ನಿಸಿದ್ದು, ಪೊಲೀಸರ ಸಮಯ ಪ್ರಜ್ಞೆಯಿಂದಾಗಿ  ಆಗಬಹುದಾಗಿದ್ದ ಅನಾಹುತ ತಪ್ಪಿದಂತಾಗಿದೆ.

ಕರ್ನಾಟಕ ಬಂದ್ ಮತ್ತು ಕನ್ನಡಪರ ಸಂಘಟನೆಗಳು ರಾಜಭವನದ ಬಳಿ ಪ್ರತಿಭಟನೆ ನಡೆಸುವ ಕುರಿತು ಶಂಕೆಯಿಂದಲೇ ಇಂದು ರಾಜಭವನದ ಆವರಣದಲ್ಲಿ ಹೆಚ್ಚು ಪೊಲೀಸ್ ಭದ್ರತೆ  ನಿಯೋಜಿಸಲಾಗಿತ್ತು. ಡಿಸಿಪಿ ಸಂದೀಪ್ ಪಾಟೀಲ್ ನೇತೃತ್ವದ ಪೊಲೀಸರ ತಂಡ ಪ್ರತಿಭಟನಾಕಾರರನ್ನು ನಿಯಂತ್ರಿಸಿದ್ದಷ್ಟೇ ಅಲ್ಲದೆ ಅವರನ್ನು ವಶಕ್ಕೆ ಪಡೆದಿದ್ದಾರೆ. ಬಿಎಂಟಿಸ್ ಬಸ್ ನಲ್ಲಿ  ಮಹಿಳಾ ಕಾರ್ಯಕರ್ತರು ಸೇರಿದಂತೆ ಉದ್ರಿಕ್ತ ಕರವೇ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ರಾಜ್ಯಪಾಲರು ತಮ್ಮ ಎಸ್ಕಾರ್ಟ್ ವಾಹನದೊಂದಿಗೆ ರಾಜಭವನದಿಂದ  ಹೊರಗೆ ತೆರಳಿದರು.

ಬಂದ್ ಹಿನ್ನಲೆಯಲ್ಲಿ ರಾಜ್ಯಪಾಲರಿಗೆ ನೀಡಿರುವ ಭದ್ರತೆಯನ್ನು ಕೂಡ ಹೆಚ್ಚಿಸಲಾಗಿತ್ತು. ಹೆಚ್ಚುವರಿ ಪೊಲೀಸರು ಮತ್ತು ಹೆಚ್ಚುವರಿ ಭದ್ರತಾ ವಾಹನಗಳನ್ನು ರಾಜ್ಯಪಾಲರ ಭದ್ರತೆಗಾಗಿ ನಿಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT