ಸ್ಯಾಂಡಲ್ ವುಡ್ ನಟರ ಬೃಹತ್ ಪ್ರತಿಭಟನಾ ಮೆರವಣಿಗೆ (ಸಂಗ್ರಹ ಚಿತ್ರ) 
ರಾಜ್ಯ

ಮಹದಾಯಿ ಹೋರಾಟಕ್ಕೆ ಸ್ಯಾಂಡಲ್ ವುಡ್ ಸಾಥ್: ತೀರ್ಪು ವಿರೋಧಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ

ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮಹದಾಯಿ ನ್ಯಾಯಾಧಿಕರಣದ ತೀರ್ಪನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಇದೀಗ ಕನ್ನಡ ಚಲನ ಚಿತ್ರರಂಗದ ವತಿಯಿಂದಲೂ ಮುಷ್ಕರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಬೆಂಗಳೂರು: ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮಹದಾಯಿ ನ್ಯಾಯಾಧಿಕರಣದ ತೀರ್ಪನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ  ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಇದೀಗ ಕನ್ನಡ ಚಲನ ಚಿತ್ರರಂಗದ ವತಿಯಿಂದಲೂ ಮುಷ್ಕರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ಬೆಂಬಲ ನೀಡಿ ಚಿತ್ರರಂಗ ತನ್ನ ಕೆಲಸವನ್ನು ಸ್ಥಗಿತಗೊಳಿಸಿದ್ದು, ಚಿತ್ರೀಕರಣ ನಿಲ್ಲಿಸಿ ನಟರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಅಲ್ಲದೆ  ಚಿತ್ರರಂಗದ ಗಣ್ಯರು ಆಯೋಜಿಸಿರುವ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ನಟ ಶಿವರಾಜ್ ಕುಮಾರ್, ರಮೇಶ್, ಗೋಲ್ಡನ್ ಸ್ಟಾರ್ ಗಣೇಶ್, ನಟಿ ಮೇಘನಾ ರಾಜ್, ನಟ ಪ್ರಜ್ವಲ್  ದೇವರಾಜ್, ನಟ ಪಂಕಜ್ ಸೇರಿದಂತೆ ಹಲವು ನಟ ನಟಿಯರು ಪಾಲ್ಗೊಂಡಿದ್ದಾರೆ. ಇನ್ನು ಚಿತ್ರರಂಗದ ಹೋರಾಟಕ್ಕೆ ಕಿರುತೆರೆ ನಟ ನಟಿಯರು ಕೂಡ ಸಾಥ್ ನೀಡಿದ್ದು, ನಟಿ ಹೇಮಾ ಚೌದರಿ,  ಚಿತ್ರ ನಟ ಚಿರಂಜೀವಿ ಸರ್ಜಾ, ರಂಗಾಯಣ ರಘು, ಶೃತಿ, ಜಗ್ಗೇಶ್, ಚಿರಂಜೀವಿ ಸರ್ಜಾ, ಜೈಜಗದೀಶ್, ನಿರ್ದೇಶಕ ಶಶಾಂಕ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.
ಚಿತ್ರರಂಗದ ಈ ಬೃಹತ್ ಪ್ರತಿಭಟನಾ ರ್ಯಾಲಿಗೆ ನಿರ್ಮಾಪಕ ಸಾರಾ ಗೋವಿಂದು ನೇತೃತ್ವ ವಹಿಸಿದ್ದು, ಟೌನ್ ಹಾಲ್ ನಿಂದ ಆರಂಭವಾಗಿರುವ ಈ ಬೃಹತ್ ರ್ಯಾಲಿ ಕಾರ್ಪೋರೇಷನ್  ಸರ್ಕಲ್, ಮೈಸೂರು ಬ್ಯಾಂಕ್ ವೃತ್ತ, ಸರ್ಕಾರಿ ಕಲಾ ಕಾಲೇಜು ಮೂಲಕ ಫ್ರೀಡಂ ಪಾರ್ಕ್ ತಲುಪಲಿದೆ. ಇನ್ನು ರ್ಯಾಲಿಯಲ್ಲಿ ಪಾಲ್ಗೊಂಡಿರುವ ತಮ್ಮ ನೆಚ್ಚಿನ ನಟ-ನಟಿಯರನ್ನು ನೋಡಲು  ಸಾವಿರಾರು ಅಭಿಮಾನಿಗಳು ಕೂಡ ನೆರೆದಿದ್ದು, ರ್ಯಾಲಿ ಸಾಗುತ್ತಿರುವ ದಾರಿಯುದ್ದಕ್ಕೂ ಘೋಷಣೆಗಳನ್ನು ಕೂಗುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ