ಬಸಪ್ಪ ಪಾಟೀಲ-ಹಸನ್ ಸಾಬ್ 
ರಾಜ್ಯ

ಸಕಲ ಸರ್ಕಾರಿ ಗೌರವದೊಂದಿಗೆ ಕರ್ನಾಟಕದ ಹುತಾತ್ಮ ವೀರ ಯೋಧರ ಅಂತ್ಯಕ್ರಿಯೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಗಡಿಭಾಗದಲ್ಲಿನ ಬೆಟಾಲಿಕ್ ಸೆಕ್ಟರ್ ನಲ್ಲಿ ಸಂಭವಿಸಿದ್ದ ನೆಲಬಾಂಬ್ ಸ್ಫೋಟದಲ್ಲಿ ಹುತಾತ್ಮರಾಗಿದ್ದ ಕರ್ನಾಟಕದ ಯೋಧರಾದ...

ಬೆಳಗಾವಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಗಡಿಭಾಗದಲ್ಲಿನ ಬೆಟಾಲಿಕ್ ಸೆಕ್ಟರ್ ನಲ್ಲಿ ಸಂಭವಿಸಿದ್ದ ನೆಲಬಾಂಬ್ ಸ್ಫೋಟದಲ್ಲಿ ಹುತಾತ್ಮರಾಗಿದ್ದ ಕರ್ನಾಟಕದ ಯೋಧರಾದ ಬಸವರಾಜ ಚನ್ನಪ್ಪ ಪಾಟೀಲ ಹಾಗೂ ಹಸನ್ ಸಾಬ್ ಇಮಾನ್ ಸಾಬ್ ಖುದಾವಂದ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಬೆಳಗಾವಿ ಜಿಲ್ಲೆ ಗೋಕಾಕದ ನಬಪುರ ಗ್ರಾಮದ ಯೋಧ ಸುಬೇದಾರ 45 ವರ್ಷದ ಬಸವರಾಜ ಬಸಪ್ಪ ಪಾಟೀಲ ಅವರ ಅಂತ್ಯ ಸಂಸ್ಕಾರ ಖನಗಾವಿ ರುದ್ರಭೂಮಿಯಲ್ಲಿ ನೆರವೇರಿತು. ಇನ್ನು ಧಾರವಾಡ ಜಿಲ್ಲೆ ನವಲಗುಂದ ತಾಲೂಕು ಸೈದಾಪುರ ಗ್ರಾಮದ ಬಿಎಸ್ಎಫ್ ಯೋಧ 24 ವರ್ಷದ ಹಸನ್ ಸಾಬ್ ಇಮಾನ್ ಸಾಬ್ ಖುದಾವಂದ ಅಂತ್ಯ ಸಂಸ್ಕಾರ ಸ್ವಗ್ರಾಮದಲ್ಲಿ ನಡೆಯಿತು.

ಕಾಶ್ಮೀರ ಬೆಟಾಲಿಕ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಬಸಪ್ಪ ಪಾಟೀಲ್ ಅವರು 1990ರ ಆಗಸ್ಟ್ ನಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸಿದರು. ಯುನಿಟ್-21 ಮದ್ರಾಸ್ 192 ಬ್ರಿಗೇಡ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ವೀರ ಯೋಧರ ಅಂತ್ಯಕ್ರಿಯೆ ಸಂದರ್ಭದಲ್ಲಿ ಕುಟುಂಬಸ್ಥರು, ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸಾವಿರಾರು ಜನರು ವೀರ ಯೋಧ ಪಾಟೀಲ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಮತ್ತೆ ಹುಟ್ಟಿ ಬನ್ನಿ ಎಂಬ ಘೋಷಣೆಗಳನ್ನು ಕೂಗಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT