ಡಾ.ಜಿ.ಪರಮೇಶ್ವರ್ 
ರಾಜ್ಯ

ನಾಳೆ ಪೊಲೀಸರ ಪ್ರತಿಭಟನೆಯಿಲ್ಲ: ಡಾ.ಜಿ.ಪರಮೇಶ್ವರ್

ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ (ಶನಿವಾರ) ಪೊಲೀಸರು ಕರ್ತವ್ಯ ಬಹಿಷ್ಕರಿಸಿ ನಡೆಸಲುದ್ದೇಶಿಸಿದ್ದ...

ಬೆಂಗಳೂರು: ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ (ಶನಿವಾರ) ಪೊಲೀಸರು ಕರ್ತವ್ಯ ಬಹಿಷ್ಕರಿಸಿ ನಡೆಸಲುದ್ದೇಶಿಸಿದ್ದ ಪ್ರತಿಭಟನೆ ನಡೆಸುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಪೊಲೀಸರ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಈಡೇರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ  ಈ ವಿಷಯ ತಿಳಿಸಿದ ಅವರು, ನಮಗೆ ತಿಳಿದಿರುವ ಮಾಹಿತಿಯ ಪ್ರಕಾರ ನಾಳೆ ಪೊಲೀಸರು ಪ್ರತಿಭಟನೆ ನಡೆಸುತ್ತಿಲ್ಲ. ಯಾವೊಬ್ಬ ಪೊಲೀಸ್‌ ರಜೆ ಪಡೆಯುತ್ತಿಲ್ಲ,ಈಗಾಗಲೇ ರಜೆಗೆ ಅರ್ಜಿ ಸಲ್ಲಿಸಿದವರು ವಾಪಾಸ್‌ ಪಡೆದಿದ್ದಾರೆ ಎಂದರು.  
ಪೊಲೀಸರಾಗಲಿ, ಪೋಲಿಸರ  ಕುಟುಂಬ ಸದಸ್ಯರು ಪ್ರತಿಭಟನೆ ಮಾಡುವಂತಿಲ್ಲ; ಮಾಡಿದರೆ ಅವರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ. ಕ್ವಾಟ್ರಸ್‌ ನಲ್ಲಿದ್ದವರು ಪ್ರತಿಭಟನೆ ನಡೆಸಿದರೆ ಕೂಡಲೇ ಮನೆ ಖಾಲಿ ಮಾಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ತಾವು ಮಖ್ಯಮಂತ್ರಿಗಳ ಜೊತೆ ಪೊಲೀಸರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದು,ಅವರ ಬೇಡಿಕೆಗಳನ್ನುಈಡೇರಿಸುವ ಭರವಸೆ ನೀಡಿದ್ದೇವೆ.ವಾರದ ರಜೆ ಕಡ್ಡಾಯವಾಗಿ ನೀಡುವುದರ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು ಎಂದರು. ಇನ್ನೆರಡು ವರ್ಷಗಳಲ್ಲಿ 15 ಸಾವಿರ ಪೊಲೀಸರನ್ನು ನೇಮಕಾತಿ ಮಾಡಲಾಗುವುದು ಎಂದು ಪರಮೇಶ್ವರ್‌ ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!