ಅನುಪಮಾ ಶೆಣೈ 
ರಾಜ್ಯ

ಅನುಪಮಾ ಶೆಣೈ ಫೇಸ್ ಬುಕ್ ಸಮರ: ಎಫ್ಐಆರ್ ದಾಖಲಿಸ್ತಾರಂತೆ.. #ಬೃಹನ್ನಳೆಯರು!

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ನಾಯ್ಕ್ ಅವರ ಕೆಂಗಣ್ಣಿಗೆ ಗುರಿಯಾಗಿ ವರ್ಗಾವಣೆಯಾಗಿದ್ದ ಕೂಡ್ಲಿಗಿ ಡಿವೈಎಸ್ ಪಿ ಅನುಪಮಾ...

ಬೆಂಗಳೂರು: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ನಾಯ್ಕ್ ಅವರ ಕೆಂಗಣ್ಣಿಗೆ ಗುರಿಯಾಗಿ ವರ್ಗಾವಣೆಯಾಗಿದ್ದ ಕೂಡ್ಲಿಗಿ ಡಿವೈಎಸ್ ಪಿ ಅನುಪಮಾ ಶೆಣೈ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ, ಈಗ ವ್ಯವಸ್ಥೆಯ ವಿರುದ್ಧ ಫೇಸ್ ಬುಕ್ ಸಮರ ಸಾರಿದ್ದಾರೆ.
ಶನಿವಾರ ರಾಜಿನಾಮೆ ನೀಡಿದ ಬಳಿಕ ಇಂದು ಮೊದಲ ಬಾರಿಗೆ ತಮ್ಮ ಫೇಸ್ ಬುಕ್ ಸ್ಟೇಟಸ್ ಅಪಡೇಟ್ ಮಾಡಿರುವ ಶೆಣೈ, 'ನನ್ನ Facebook ಸ್ತ್ರನೋಡಿ ನನ್ನ ಮೇಲೆ FIR ದಾಖಲಿಸ್ತಾರಂತೆ..#ಬೃಹನ್ನಳೆಯರು... ಎಂದು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಈಗಾಗಲೇ ಅನುಪಮಾ ಶೆಣೈ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿದೆ. ಮತ್ತೊಂದೆಡೆ ಇಂದು ಬೆಳಗ್ಗೆ ತಮ್ಮ ಫೇಸ್ ಬುಕ್ ಪೇಜ್ ಸ್ಟೇಟಸ್ ಅಪ್ ಡೇಟ್ ಮಾಡಿರುವ ಅನುಪಮಾ, ಡಿಎಆರ್ ಪೇದೆ ರಾಮಕೃಷ್ಣ ಅವರನ್ನು ವಜಾಗೊಳಿಸಿದ್ದಕ್ಕೆ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಎಂದು ವ್ಯಂಗ್ಯವಾಡಿದ್ದರು.
ನಂತರ ಅನುಪಮಾ ಶೆಣೈ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂಬ ವರದಿ ಪ್ರಸಾರವಾದ ಹಿನ್ನೆಲೆಯಲ್ಲಿ ಮತ್ತೆ ಫೇಸ್ ಬುಕ್ ನಲ್ಲಿ ಸಕ್ರಿಯವಾಗಿರುವ ಶೆಣೈ, FIR ದಾಖಲಿಸ್ತಾರಂತೆ..#ಬೃಹನ್ನಳೆಯರು... ಎಂದು ಅಪ್ ಡೇಟ್ ಮಾಡುವ ಮೂಲಕ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ!
ಇನ್ನು ಅನುಪಮಾ ಶೆಣೈ ರಾಜಿನಾಮೆ ಬಗ್ಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಯುಟಿ ಖಾದರ್ ಅವರು, ಅನುಪಮಾ ಶೆಣೈ ನಮ್ಮೂರಿನವರು...ಅವರ ಮನವೊಲಿಸುವ ಪ್ರಯತ್ನ ಮಾಡುತ್ತೇವೆ. ದಿಟ್ಟ ಅಧಿಕಾರಿಗಳನ್ನು ನಮ್ಮ ಸರ್ಕಾರ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!