ಮಂಗಳೂರು: ಮಂಗಳೂರಿನ ಹೊರವಲಯದಲ್ಲಿ ಶುಕ್ರವಾರ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೊರವಲಯದ ವಳಚ್ಚಿಲ್ ಎಂಬಲ್ಲಿನ ಅರ್ಕುಳ ಬಳಿ ಬಿ.ಸಿ.ರೋಡ್ ಮತ್ತು ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೈನರ್‌ವೊಂದು ಎದುರುಗಡೆಯಿಂದ ಬರುತ್ತಿದ್ದ ಮಾರುತಿ ಕಾರಿಗೆ ಹಾಗೂ ಆಟೋಗೆ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ರಿಕ್ಷಾ ಕಂಟೈನರ್ ಅಡಿಯಲ್ಲಿ ಸಿಲುಕಿ ನಜ್ಜು ಗುಜ್ಜಾಗಿದೆ.ಈ ನತದೃಷ್ಟ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಬಿ.ಸಿ.ರೋಡ್ ನಂದಾವರದ ಆರು ಮಂದಿಯ ಪೈಕಿ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಇಬ್ಬರು ಸೇರಿದಂತೆ ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.