ಆರ್'ಟಿಐ ಕಾರ್ಯಕರ್ತ ಹತ್ಯೆ ಪ್ರಕರಣ: ನರೇಶ್ ಶೆಣೈ ಜಾಮೀನು ಅರ್ಜಿ ತಿರಸ್ಕೃತ
ಆರ್ ಟಿಐ ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನರೇಶ್ ಶೆಣೈ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈ ಕೋರ್ಟ್...
ಬೆಂಗಳೂರು: ಆರ್ ಟಿಐ ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನರೇಶ್ ಶೆಣೈ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈ ಕೋರ್ಟ್ ಗುರುವಾರ ತಿರಸ್ಕರಿಸಿದೆ.
ಕೆಲವು ದಿನಗಳ ಹಿಂದಷ್ಟೇ ಆರ್ ಟಿಐ ಕಾರ್ಯಕರ್ತರಾದ ವಿನಾಯಕ್ ಬಾಳಿಗರನ್ನು ಹತ್ಯೆ ಮಾಡಿದ ನಂತರ ನಮೋ ಬ್ರಿಗೇಡ್ ಮುಖ್ಯಸ್ಥರಾದ ನರೇಶ್ ಶೆಣೈ ಅವರು ತಲೆಮರೆಸಿಕೊಂಡಿದ್ದರು. ನಂತರ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯವೊಂದರಲ್ಲಿ ನಿರೀಕ್ಷಣಾ ಜಾಮೀನು ಸಲ್ಲಿಸಿದ್ದರು. ಇದರಂತೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನನ್ನು ತಿರಸ್ಕರಿಸಿತ್ತು.
ಜಿಲ್ಲಾ ನ್ಯಾಯಾಲಯದ ತೀರ್ಪಿನ ನಂತರ ಶೆಣೈ ಪರ ವಕೀಲರು ಹೈ ಕೋರ್ಟ್ ಮೆಟ್ಟಿಲೇರಿದ್ದರು. ನಿರೀಕ್ಷಣಾ ಜಾಮೀನು ನೀಡುವಂತೆ ವಾದ ಮಂಡಿಸಿದ್ದರು. ಇದರಂತೆ ನಿನ್ನೆ ನಡೆದ ವಿಚಾರಣೆ ವೇಳೆ ವಾದ ವಿವಾದಗಳನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶ ಫಣೀಂದ್ರ ಅವರು ನಿರೀಕ್ಷಣಾ ಜಾಮೀನು ರದ್ದುಪಡಿಸಿ ಆದೇಶ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.