ತುಮಕೂರು: ನಮ್ಮ ಕುಟುಂಬ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದು, ಸರ್ಕಾರಿ ಕಚೇರಿಯೊಂದರಲ್ಲಿ ಕಸ ಗುಡಿಸುವ ಕೆಲಸವನ್ನಾದರೂ ಕೊಡಿ ಎಂದು ದಿವಂಗತ ಡಿ.ಕೆ.ರವಿ ತಾಯಿ ಗೌರಮ್ಮ ಅವರು ಶುಕ್ರವಾರ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ 37ನೇ ಹುಟ್ಟಹಬ್ಬದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಸರ್ಕಾರ ವರ್ತನೆ ವಿರುದ್ಧ ಕಿಡಿಕಾರಿದ್ದಾರೆ. ಮಗನ ಸಾವಿನ ಹಿಂದಿರುವ ರಹಸ್ಯವನ್ನು ಭೇದಿಸುವಲ್ಲಿ ಸರ್ಕಾರ ವಿಫಲವಾಗಿದೆ. ಸರ್ಕಾರದಿಂದ ಈ ವರೆಗೂ ನಮಗೆ ಯಾವುದೇ ನೆರವು ಸಿಕ್ಕಿಲ್ಲ.
ನನ್ನ ಸೊಸೆ ಸರ್ಕಾರಿ ಹುದ್ದೆಯನ್ನು ತಿರಸ್ಕರಿಸಿ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗಿದ್ದಾಳೆ. ಆಕೆ ಈ ವರೆಗೂ ನಮ್ಮನ್ನು ಸಂಪರ್ಕಿಸಿಲ್ಲ. ಮಗನ ಸಾವಿನ ನಂತರ ಸೊಸೆ ನಮ್ಮ ಬಗ್ಗೆ ದೂರವಾಣಿ ಮೂಲಕವಾದರೂ ವಿಚಾರಿಸಿಲ್ಲ. ಮೊದಲ ಪುಣ್ಮ ತಿಥಿಯಂದು ಸೊಸೆಯನ್ನು ನೋಡಿದ್ದು. ಕುಟುಂಬ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದು, ಸರ್ಕಾರಿ ಕಚೇರಿಯಲ್ಲಿ ಕಸ ಗುಡಿಸುವ ಕೆಲಸವನ್ನಾದರೂ ಕೊಡಿ ಎಂದು ಕಣ್ಣೀರಿಟ್ಟಿದ್ದಾರೆ.