ಸಾಂದರ್ಭಿಕ ಚಿತ್ರ 
ರಾಜ್ಯ

ಯುವತಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕ ಬಂಧನ

ಸಾಮಾಜಿಕ ಜಾಲತಾಣದಲ್ಲಿ ನಗ್ನ ವಿಡಿಯೋ ಹಾಕುವುದಾಗಿ ಯುವತಿಯೊಬ್ಬಳಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನೊಬ್ಬನನ್ನು ಶಂಕರನಾರಾಯಣ ಠಾಣಾ ಪೋಲೀಸರು...

ಕುಂದಾಪುರ: ಸಾಮಾಜಿಕ ಜಾಲತಾಣದಲ್ಲಿ ನಗ್ನ ವಿಡಿಯೋ ಹಾಕುವುದಾಗಿ ಯುವತಿಯೊಬ್ಬಳಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನೊಬ್ಬನನ್ನು ಶಂಕರನಾರಾಯಣ ಠಾಣಾ ಪೋಲೀಸರು ಬಂಧನಕ್ಕೊಳಪಡಿಸಿರುವ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಶುಕ್ರವಾರ ನಡೆದಿದೆ.

ಸಂತೋಷ್ ಪೂಜಾರಿ ಬಂಧನಕ್ಕೊಳಗಾದ ಯುವಕ. ಹಲವು ದಿನಗಳಿಂದ ಯುವತಿಯೊಬ್ಬಳ ನಗ್ನ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಯುವತಿಯೊಬ್ಬಳಿಗೆ ಬೆದರಿಕೆ ಹಾಕುತ್ತಿದ್ದ ಎಂಬ ಆರೋಪದ ಮೇಲೆ ಪೊಲೀಸರು ಈತನನ್ನು ಬಂಧಿಸಿದ್ದಾರೆಂದು ತಿಳಿದುಬಂದಿದೆ.

ಯುವತಿಯ ಮಾಜಿ ಗೆಳೆಯನಾಗಿದ್ದ ಸುದರ್ಶನ್ ಶೆಟ್ಟಿ ಎಂಬುವವನು ಯುವತಿಯ ಅರಿವಿಗೆ ಬಾರದಂತೆ ಆಕೆಯ ವಿಡಿಯೋ ಮಾಡಿದ್ದಾನೆ. ಇದರಂತೆ ಕೆಲವು ದಿನಗಳ ಹಿಂದೆ ಸಂತೋಷ್ ಪೂಜಾರಿಗೆ ಈ ವಿಡಿಯೋ ಕಳುಹಿಸಿದ್ದ ಎನ್ನಲಾಗಿದೆ. ಇದೀಗ ಸುದರ್ಶನ್ ತಲೆಮರೆಸಿಕೊಂಡಿದ್ದು, ಪೊಲೀಸರು ಈತನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT