ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಮಾಣಿ ಬಳಿ ಬಸ್ಸು ಮತ್ತು ಓಮ್ನಿ ನಡುವೆ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಕೆಎಸ್ಆರ್ ಟಿಸಿ ಬಸ್ಸು ಮತ್ತು ಓಮ್ನಿ ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದ್ದು, ಓಮ್ನಿಯಲ್ಲಿದ್ದ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಮಾಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.