ಕ್ಯಾಬಿನ್ ನಲ್ಲಿ ಹೊಗೆ: ಕೆಂಪೇಗೌಡ ನಿಲ್ದಾಣದಲ್ಲಿ ಲ್ಯಾಂಡ್ ಆದ ಜೆಟ್ ಏರ್ ವೇಸ್
ಮಂಗಳೂರಿಗೆ ಹೊರಟಿದ್ದ 9 ಡಬ್ಲ್ಯು 2839 ಜೆಟ್ ಏರ್ ವೇಸ್ ವಿಮಾನದ ಕ್ಯಾಬಿನ್ನಲ್ಲಿ ಹೊಗೆ ಕಾಣಿಸಿಕೊಂಡ ಕಾರಣ...
ಬೆಂಗಳೂರು: ಮಂಗಳೂರಿಗೆ ಹೊರಟಿದ್ದ 9 ಡಬ್ಲ್ಯು 2839 ಜೆಟ್ ಏರ್ ವೇಸ್ ವಿಮಾನದ ಕ್ಯಾಬಿನ್ನಲ್ಲಿ ಹೊಗೆ ಕಾಣಿಸಿಕೊಂಡ ಕಾರಣ ತುರ್ತಾಗಿ ವಿಮಾನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.
ಇಂದು ಬೆಳಗ್ಗೆ 10.20ರ ಹೊತ್ತಿಗೆ ವಿಮಾನವನ್ನು ಆದ್ಯತೆ ಮೇರೆಗೆ ತುರ್ತುಭೂಸ್ಪರ್ಶ ಮಾಡಲಾಯಿತು. ಅದೃಷ್ಟವಷಾತ್ ಭಾರೀ ಅನಾಹುತವೊಂದು ತಪ್ಪಿ ಹೋಗಿದ್ದು, ವಿಮಾನದಲ್ಲಿ 65 ಪ್ರಯಾಣಿಕರು ಮತ್ತು 4 ಮಂದಿ ಸಿಬ್ಬಂದಿ ಸುರಕ್ಷಿತವಾಗಿ ಹೊರಬಂದಿದ್ದಾರೆ.
ಈ ಸಂದರ್ಭದಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ಮೂರು ವಿಮಾನಗಳು ಮತ್ತು ಹೊರಡಬೇಕಿದ್ದ 5 ವಿಮಾನಗಳನ್ನು ತಡೆಹಿಡಿಯಲಾಯಿತು. ನಂತರ 10.51ರ ಹೊತ್ತಿಗೆ ಕಾರ್ಯಾಚರಣೆ ಆರಂಭವಾಯಿತು.
ಈ ಸಂಬಂಧ ಜೆಟ್ ಏರ್ಲೈನ್ಸ್ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಇಂಜಿನ್ಗೆ ಬೆಂಕಿ ಹೊತ್ತಿಕೊಂಡು ಹೊಗೆ ಕಾಣಿಸಿಕೊಂಡಿದೆ ಎಂದು ಹೇಳಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.