ಸಾಂದರ್ಭಿಕ ಚಿತ್ರ 
ರಾಜ್ಯ

ಶಾಲಾ ಮಕ್ಕಳ ಬಿಸಿಯೂಟದಲ್ಲಿ ಸಾರವರ್ಧಕ ಅಕ್ಕಿ, ಬೇಳೆಕಾಳು ಬಳಕೆ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ಪೂರೈಕೆ ಮಾಡುವ ಬಿಸಿಯೂಟ ಮತ್ತಷ್ಟು ಪೌಷ್ಟಿಕದಾಯಕವಾಗಿರುವಂತೆ...

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ಪೂರೈಕೆ ಮಾಡುವ ಬಿಸಿಯೂಟ ಮತ್ತಷ್ಟು ಪೌಷ್ಟಿಕದಾಯಕವಾಗಿರುವಂತೆ ಮಾಡುವ ನಿಟ್ಟಿನಲ್ಲಿ ಸಾರವರ್ಧಕ ಅಕ್ಕಿ ಬಳಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಮಂತ್ರಿ ಪರಿಷತ್‌ ಸಭೆಯಲ್ಲಿ ಬಿಸಿಯೂಟಕ್ಕೆ ಪೌಷ್ಟಿಕಾಂಶವುಳ್ಳ ಸಾರವರ್ಧಕ ಅಕ್ಕಿ ಹಾಗೂ ಬೇಳೆಕಾಳು ಸೇರಿ ಇತರೆ ಧಾನ್ಯ ಬಳಸುವುದನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ.

ಬಿಸಿಯೂಟಕ್ಕೆ ಸಾರವರ್ಧಕ ಅಕ್ಕಿ ಸೇರಿ ಪೌಷ್ಟಿಕಾಂಶವುಳ್ಳ ಧಾನ್ಯಗಳ ಬಳಕೆಯನ್ನು ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲು ಅಕ್ಷಯ ಪಾತ್ರ ಫೌಂಡೇಶನ್‌ಗೆ ಅನುಮತಿ ನೀಡಲು ಮಂತ್ರಿ ಪರಿಷತ್‌ ಒಪ್ಪಿಗೆ ನೀಡಿದೆ. 2 ಸಾವಿರದ 600 ಶಾಲೆಗಳ ನಾಲ್ಕೂವರೆ ಲಕ್ಷ ಮಕ್ಕಳಿಗೆ ಇದರ ಪ್ರಯೋಜನ ಸಿಗಲಿದೆ.

ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ರಾಜ್ಯದಲ್ಲಿ ಬಿಸಿಯೂಟ ಯೋಜನೆಗೆ ಪೌಷ್ಟಿಕಾಂಶವುಳ್ಳ ಸಾರವರ್ಧಕ ಅಕ್ಕಿ ಬಳಕೆಗೆ ಅನುಮತಿ ನೀಡಲಾಗಿದೆ. ಪ್ರಾಯೋಗಿಕವಾಗಿ 2 ಸಾವಿರದ 600 ಶಾಲೆಗಳಲ್ಲಿ ಅನುಷ್ಠಾನಗೊಂಡ ನಂತರ ಎಲ್ಲೆಡೆ ವಿಸ್ತರಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!