ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೇಶಗೌಡ ಗೌಡರ್ ಕೊಲೆ ಪ್ರಕರಣಕ್ಕೆಸಂಬಂಧಿಸಿದಂತೆ ಶುಕ್ರವಾರ ಪೊಲೀಸರು ಐವರು ರೋಪಿಗಳನ್ನು ಬಂಧಿಸಿದ್ದಾರೆ.
ಯೋಗೇಶಗೌಡ ಕೊಲೆ ಪ್ರಕರಣ ಸಂಬಂಧ ಬಸವರಾಜ ಮುತಗಿ, ವಿನಾಯಕ ಕಟಗಿ, ವಿಕ್ರಮ್ ಬಳ್ಳಾರಿ, ಕೀರ್ತಿಕುಮಾರ್ ಕುರಹಟ್ಟಿ ಹಾಗೂ ಸಂದೀಪ್ ಎಂಬುವವರನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ ಅವರು ತಿಳಿಸಿದ್ದಾರೆ. ಅಲ್ಲದೆ ಮತ್ತೋರ್ವ ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಬೆಳ್ಳಿಗಟ್ಟಿ ಗ್ರಾಮದ ಬಳಿ ನಾಗೇಶ್ ಎಂಬವರಿಗೆ ಸೇರಿದ 40 ಎಕರೆ ಜಮೀನಿನಲ್ಲಿ, 9ಎಕರೆ ಜಮೀನನ್ನು ಯೋಗೀಶ್ ಗೌಡ ಖರೀದಿಸಿದ್ದರು. ಬಳಿಕ 15 ಎಕರೆ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದರು. ಜಮೀನು ಖರೀದಿ ವಿಷಯದಲ್ಲಿ ಯೋಗೀಶ್ ಗೌಡ ಹಾಗೂ ಮುತ್ತಗಿಗೆ ವಿವಾದ ನಡೆದಿತ್ತು. ಈ ಹಿನ್ನಲೆಯಲ್ಲಿ ಐವರು ಸೇರಿ ಸಂಚು ರೂಪಿಸಿ ಮಾರಣಾಂತಿಕ ಅಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾಗಿ ಖಚಿತ ಪಡಿಸಿದ್ದಾರೆ. ಪ್ರಕರಣ ಭೇದಿಸಲು ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ 10 ತಂಡವನ್ನು ರೂಪಿಸಲಾಗಿತ್ತು.
ಯೊಗೀಶಗೌಡ ಗೌಡರ ಅವರನ್ನು ಬುಧವಾರ ಬೆಳಗ್ಗೆ ದುಷ್ಕರ್ವಿುಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ ಹತ್ಯೆ ಮಾಡಿದ್ದರು. ಧಾರವಾಡ ಜಿಲ್ಲಾ ಪಂಚಾಯತಿಯ ಹುಬ್ಬಳಿ ಕ್ಷೇತ್ರದಿಂದ ಯೊಗೀಶಗೌಡ ಆಯ್ಕೆಯಾಗಿದ್ದರು. ಬುಧವಾರ ಬೆಳಗ್ಗೆ ಯೊಗೀಶಗೌಡ ಧಾರವಾಡ ಸಪ್ತಾಪೂರದಲ್ಲಿರುವ ಉದಯ ಹೆಲ್ತ್ ಕ್ಲಬ್, ಫಿಟ್ ನೆಸ್ ಸೆಂಟರ್ಗೆ ತೆರಳಿದ್ದಾಗ ಅವರ ಹತ್ಯೆ ಮಾಡಲಾಗಿತ್ತು.