ಯದುವೀರ್ ಒಡೆಯರ್ ಮತ್ತು ರಿಷಿಕಾ ಕುಮಾರಿ 
ರಾಜ್ಯ

ಯದುವೀರ್ ಒಡೆಯರ್ ವಿವಾಹಕ್ಕೆ ಸಿದ್ಧತೆ: ಅರಮನೆ ಪ್ರವೇಶಕ್ಕೆ ನಿರ್ಬಂಧ

ಬಹು ಕುತೂಹಲ ಮೂಡಿಸಿರುವ ಮೈಸೂರು ರಾಜಮನೆತನದ ಉತ್ತರಾಧಿಕಾರಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಅದ್ದೂರಿ ವಿವಾಹ ...

ಮೈಸೂರು: ಬಹು ಕುತೂಹಲ ಮೂಡಿಸಿರುವ ಮೈಸೂರು ರಾಜಮನೆತನದ ಉತ್ತರಾಧಿಕಾರಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಅದ್ದೂರಿ ವಿವಾಹ ಮಹೋತ್ಸವಕ್ಕೆ ಅರಮನೆ ಸಜ್ಜಾಗುತ್ತಿದೆ.

ಅರಮನೆಯಲ್ಲಿ ವಿವಾಹ ಸಂಬಂಧ ಕಾರ್ಯಕ್ರಮಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಜೂನ್‌ 23 ರಿಂದ 28 ರ ವರೆಗೆ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗುತ್ತದೆ.

ರಾಜಮಾತೆ ಪ್ರಮೋದಾ ದೇವಿ ಅವರು ಮೈಸೂರು ಜಿಲ್ಲಾಧಿಕಾರಿ  ಶಿಖಾ ಅವರಿಗೆ ಪತ್ರ ಬರೆದು ಜೂನ್ 23 ರಿಂದ 28 ವರೆಗೆ ಅರಮನೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲು ಮನವಿ ಮಾಡಿದ್ದಾರೆ.

ರಾಜಸ್ಥಾನದ ದುಂಗರ್ಪುರ್‌ ರಾಜಮನೆತನದ ರಿಶಿಕಾಕುಮಾರಿ ಮನವಿ ಅವರನ್ನು ಯದುವೀರ್‌ ಅವರು ಜೂನ್‌ 27 ರಂದು ವಿವಾಹವಾಗಲಿದ್ದಾರೆ. 28 ರಂದು ಅರಮನೆಯಲ್ಲಿ ಅರತಕ್ಷತೆ ನಡೆಯಲಿದೆ.

ವಿಶ್ವ ವಿಖ್ಯಾತ ಅಂಬಾವಿಲಾಸ ಅರಮನೆ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ವಿವಾಹ ಮಹೋತ್ಸವ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!

IIT Bombay ವಿದ್ಯಾರ್ಥಿ ನಕಲು ಮಾಡಿದ್ದನ್ನು ತಡೆದಿದ್ದೇ ತಪ್ಪಾ? ಪ್ರೊಫೆಸರ್ ವಿರುದ್ಧ ಪ್ರತಿಭಟನೆ; ಯಾರು ಈ ಪ್ರೊ. Suryanarayana Doolla?

TMC ಹೆಸರು-ಚಿಹ್ನೆ ಫ್ರೀಜ್; ಚುನಾವಣಾ ಆಯೋಗದ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಆಕ್ಷೇಪ, ತುರ್ತು ವಿಚಾರಣೆಗೆ ಸುಪ್ರೀಂ ಒಪ್ಪಿಗೆ..!

ಭೂಮಿಯನ್ನು ಸುತ್ತುತ್ತಿರುವ ಆಯುಧಗಳು: ಭಾರತದ ಮುಂದಿರುವ ಸವಾಲುಗಳೇನು? (ಜಾಗತಿಕ ಜಗಲಿ)

ರಾಯಲಸೀಮೆ ವಿಸ್ಮಯ; ನೀರಿಲ್ಲದೇ ಗಣಪನ ವಿಸರ್ಜನೆ, ನದಿ ತಟದಲ್ಲಿ ಮೂರ್ತಿಗಳು ಅನಾಥ; ಕೊನೆಗೂ ಸುರಿದ ಮಳೆರಾಯ, Video