ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ಮಹೇಶ್ ಚಂದ್ರಗುರು 
ರಾಜ್ಯ

ಶ್ರೀರಾಮನ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರೊ.ಮಹೇಶ್ ಚಂದ್ರಗುರು ಅಮಾನತು

ಶ್ರೀರಾಮಚಂದ್ರನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ಮಹೇಶ್ ಚಂದ್ರಗುರು ಅವರನ್ನು...

ಮೈಸೂರು: ಶ್ರೀರಾಮಚಂದ್ರನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ಮಹೇಶ್ ಚಂದ್ರಗುರು ಅವರನ್ನು ಮಂಗಳವಾರ ಅಮಾನತು ಮಾಡಲಾಗಿದೆ.

2015ರ ಆರಂಭಿಕ ತಿಂಗಳಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಮಹೇಶ್ ಚಂದ್ರಗುರು ಅವರು ಶ್ರೀರಾಮಚಂದ್ರನ ಕುರಿತು ಅವಹೇಳನಕಾರಿ ಮಾತುಗಳನ್ನಾಡಿ ಧಾರ್ಮಿ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾರೆಂದು ಆರೋಪಿಸಿ ಸ್ಥಳೀಯರಾದ ರವಿಶಂಕರ್ ನಗರದ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಸೆಕ್ಷನ್ 285ಎ ಅನ್ವಯ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಅಲ್ಲದೆ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಕೆಲವು ದಿನಗಳ ಹಿಂದಷ್ಟೇ ವಿಜಾರಣೆಗೆ ಹಾಜರಾಗುವಂತೆ ಸಮನ್ಸ್ ಇದ್ದುದರಿಂದ ಮಹೇಶ್ ಚಂದ್ರಗುರು ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯವು, ಪ್ರಕರಣ ಜಾಮೀನು ರಹಿತವಾಗಿರುವುದರಿಂದ ಮಹೇಸ್ ಚಂದ್ರ ಅವರನ್ನು ಜೂ.20 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಮಹೇಶ್ ಗುರು ಅವರು ಬಂಧನಕ್ಕೊಳಗಾಗಿ 48 ಗಂಟೆಗಳು ಕಳೆದರೂ ಈ ವರೆಗೂ ಅವರಿಗೆ ಜಾಮೀನು ದೊರಕಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಮಹೇಶ್ ಚಂದ್ರಗುರು ಅಮಾನತು ಹೊಸದಲ್ಲ
ಮಹೇಶ್ ಚಂದ್ರಗುರು ಅವರು ಅಮಾನತಾಗುತ್ತಿರುವುದು ಇದು ಹೊಸದೇನಲ್ಲ. ಈ ಹಿಂದೆಯೂ ವಿಶ್ವವಿದ್ಯಾಲಯದ ನಿಧಿಗಳ ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ಕೆಲವು ವರ್ಷಗಳ ಅಮಾನತು ಮಾಡಲಾಗಿತ್ತು. ಅಲ್ಲದೆ, ಈ ವರ್ಷದ ಜನವರಿ ತಿಂಗಳಿನಲ್ಲಿಯೂ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ವಿರುದ್ಧವೂ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದರು.

ಮಾನಸಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ದಲಿತ ವಿದ್ಯಾರ್ಥಿ ಒಕ್ಕೂಟ ಏರ್ಪಡಿಸಿದ್ದ ವೇಮುಲಗೆ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ಮೋದಿ ಒಬ್ಬ ಬೇವರ್ಸಿ. ಇರಾನಿಯವರನ್ನು ಮೋದಿ ಮಾನವ ಸಂಪನ್ಮೂಲ ಸಚಿವೆಯಾಗಿ ಯಾಕೆ ಮಾಡಿದ್ದರು? ಸ್ಮೃತಿ ಇರಾನಿ ಓರ್ವ ಧರ್ಡ್ ರೇಡ್ ನಟಿ. ಮೋದಿಗೆ ಇರಾನಿ ಬಗ್ಗೆ ಹೆಚ್ಚು ಆಸಕ್ತಿ ಇದ್ದರೆ ಅವರನ್ನು ಗೃಹ ಸಚಿವೆಯಾಗಿ ಮಾಡಬೇಕಿತ್ತು. ಮಾನವ ಸಂಪನ್ಮೂಲ ಸಚಿವೆಯಾಗಿ ಮಾಡಿದ ದೇಶದ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆಂದು ಬಾಯಿಗೆ ಬಂದಂತೆ ಮಾತನಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT