ಸಾಂದರ್ಭಿಕ ಚಿತ್ರ 
ರಾಜ್ಯ

ಮಾದಕ ವಸ್ತು ಕಳ್ಳ ಸಾಗಣೆ: ಬೆಂಗಳೂರಿನಲ್ಲಿ ರೂಪದರ್ಶಿ ಬಂಧನ

ಮಾದಕ ವಸ್ತು ಕಳ್ಳ ಸಾಗಣೆ ಆರೋಪದಲ್ಲಿ ಬೆಂಗಳೂರು ಮೂಲದ ರೂಪದರ್ಶಿಯನ್ನು ಕೇಂದ್ರ ಮಾದಕ ವಸ್ತು ಕಳ್ಳಸಾಗಣೆ ನಿಯಂತ್ರಣ ದಳದ...

ಬೆಂಗಳೂರು: ಮಾದಕ ವಸ್ತು ಕಳ್ಳ ಸಾಗಣೆ ಆರೋಪದಲ್ಲಿ ಬೆಂಗಳೂರು ಮೂಲದ ರೂಪದರ್ಶಿಯನ್ನು ಕೇಂದ್ರ ಮಾದಕ ವಸ್ತು ಕಳ್ಳಸಾಗಣೆ ನಿಯಂತ್ರಣ ದಳದ (ಎನ್‌ಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ. ಮಾಡೆಲಿಂಗ್ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಈಕೆಯ ಮೇಲೆ ಸ್ನೇಹಿತರ ಜತೆ ಸೇರಿ ಮಾದಕ ವಸ್ತು ಸಾಗಾಣಿಕೆ ಮಾಡಿದ ಆರೋಪವಿದೆ.

2015ರ ನವೆಂಬರ್ 30 ರಂದು ಆರ್ .ಟಿ ನಗರದಲ್ಲಿರುವ ಈಕೆಯ ವಾಸವಿದ್ದ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆಸಿದ್ದ ಎನ್ ಸಿಬಿ ಅಧಿಕಾರಿಗಳು 110 ಗ್ರಾಂ ಕೊಕೇನ್ ಸೇರಿದಂತೆ ಹಲವು ಮಾದಕ ಪದಾರ್ಥಗಳನ್ನ ವಶಪಡಿಸಿಕೊಂಡಿದ್ದರು.  

2015ರಲ್ಲಿ ರೂಪದರ್ಶಿ ಸ್ನೇಹಿತ ನಿಶಾನ್ ಎಂಬಾತನನ್ನು ಬಂಧಿಸಲಾಗಿತ್ತು. ಈತನು ನೀಡಿದ ಮಾಹಿತಿ ಮೇರೆಗೆ ರೂಪದರ್ಶಿ ಮತ್ತು ಆಕೆಯ ಮೂವರು ಸ್ನೇಹಿತರನ್ನು ಬಂಧಿಸಲಾಗಿದೆ. ಅವರಲ್ಲಿ ಇಬ್ಬರು ಮಂಗಳೂರು ಮೂಲದವರಾಗಿದ್ದು ಮತ್ತೊಬ್ಬರು ಬೆಂಗಳೂರಿನವರಾಗಿದ್ದಾರೆ.

ಹಲವು ವರ್ಷಗಳಿಂದ ನಿಶಾನ್ ಮತ್ತು ರೂಪದರ್ಶಿಗೆ ಸಂಬಂಧವಿದ್ದು, ಈ ಇಬ್ಬರು ಗೋವಾ ಹಾಗೂ ವಿದೇಶದಿಂದ ಮಾದಕ ವಸ್ತುಗಳನ್ನು ತಂದು, ನಗರದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ.
 
ರೂಪದರ್ಶಿಯನ್ನು ಮಂಗಳವಾರವೇ ಬಂಧಿಸಲಾಗಿದ್ದು ತೀವ್ರ ವಿಚಾರಣೆ ಗೊಳಸಪಡಿಸಲಾಗಿದೆ. ಬುಧವಾರ ಆಕೆಯನ್ನು ನ್ಯಾಯಾಧೀಶರ ಮುಂದೆ ಸಹ ಹಾಜರು ಪಡಿಸಲಾಗಿತ್ತು. ಆದರೆ ನಿಶಾನ್ ನ ವ್ಯವಹಾರಗಳಲ್ಲಿ ತನ್ನ ಪಾತ್ರವನ್ನು ರೂಪದರ್ಶಿ ತಳ್ಳಿ ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ