ಆರ್ ಟಿಐ ಕಾರ್ಯಕರ್ತನ ಕೊಲೆ ಕೇಸ್: ತಲೆ ಮರೆಸಿಕೊಂಡಿದ್ದ ನರೇಶ್ ಶೆಣೈ ಬಂಧನ
ಆರ್ ಟಿಐ ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿ ನರೇಶ್...
ಮಂಗಳೂರು: ಆರ್ ಟಿಐ ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿ ನರೇಶ್ ಶೆಣೈರನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ವಿನಾಯಕ್ ಬಾಳಿಗ ಹತ್ಯೆಯ ನಂತರ ತಲೆಮರೆಸಿಕೊಂಡಿದ್ದ ನಮೋ ಬ್ರಿಗೇಡ್ ಮುಖ್ಯಸ್ಥರಾದ ನರೇಶ್ ಶೆಣೈರನ್ನು ಇಂದು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆಲವು ದಿನಗಳ ಹಿಂದೆ ನರೇಶ್ ಶೆಣೈ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿತ್ತು. ನಂತರ ಹೈಕೋರ್ಟ್ ಸಹ ಆರೋಪಿಗೆ ಜಾಮೀನು ನೀಡಲು ನಿರಾಕರಿಸಿತ್ತು.
ಕಳೆದ ಮಾ. 21ರಂದು ವಿನಾಯಕ ಬಾಳಿಗಾ ಅವರನ್ನು ದುಷ್ಕರ್ಮಿಗಳು ಅವರ ಮನೆಯ ಬಳಿ ಕೊಲೆ ಮಾಡಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.