ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರ್ಗಿ ರ‍್ಯಾಗಿಂಗ್ ಪ್ರಕರಣ: 3 ಯುವತಿಯರ ಬಂಧನ

ಕಲಬುರ್ಗಿ ವಿದ್ಯಾರ್ಥಿನಿ ರ‍್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್-ಕಮರ್ ವೈದ್ಯಕೀಯ ಕಾಲೇಜಿನ ಮೂವರು ಬಿಎಸ್ ಸಿ ಅಂತಿಮ ಪದವಿ ವಿದ್ಯಾರ್ಥಿನಿಯರನ್ನು...

ಕಲಬುರ್ಗಿ: ಕಲಬುರ್ಗಿ ವಿದ್ಯಾರ್ಥಿನಿ ರ‍್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್-ಕಮರ್ ವೈದ್ಯಕೀಯ ಕಾಲೇಜಿನ ಮೂವರು ಬಿಎಸ್ ಸಿ ಅಂತಿಮ ಪದವಿ ವಿದ್ಯಾರ್ಥಿನಿಯರನ್ನು ಶುಕ್ರವಾರ ರಾತ್ರಿ ಬಂಧಿನಕ್ಕೊಳಪಡಿಸಲಾಗಿದೆ.

ಕೃಷ್ಣ ಪ್ರಿಯಾ, ಅಥೆರಾ ಮತ್ತು ಲಕ್ಷ್ಮಿ ಬಂಧಿತ ವಿದ್ಯಾರ್ಥಿನಿಯರಾಗಿದ್ದು, ವಿದ್ಯಾರ್ಥಿನಿಯರ ವಿರುದ್ಧ ಇದೀಗ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ರ‍್ಯಾಗಿಂಗ್ ಪ್ರಕರಣವನ್ನು ವಿಶೇಷ ತನಿಖಾಧಿಕಾರಿ ಜಾನ್ಹವಿ ಅವರು ತನಿಖೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಕೇರಳ ಪೊಲೀಸರು ಪ್ರಕರಣ ಸಂಬಂಧ 5 ವಿದ್ಯಾರ್ಥಿನಿಯರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದರು. ಎಫ್ಐಆರ್ ದಾಖಲಾತಿಯನ್ನು ಪಡೆದಿರುವ ರಾಜ್ಯದ ಪೊಲೀಸರು ಪ್ರಕರಣ ಸಂಬಂಧ ಇದೀಗ ಮೂವರು ವಿದ್ಯಾರ್ಥಿನಿಯರನ್ನು ಬಂಧಿಸಿದ್ದಾರೆ.

ಮೂಲಗಳು ತಿಳಿಸಿರುವ ಪ್ರಕಾರ, ತನಿಖಾಧಿಕಾರಿಗಳು ಈಗಾಗಲೇ ಕಾಲೇಜು, ಹಾಸ್ಟೆಲ್ ಸಿಬ್ಬಂದಿಗಳು ಹಾಗೂ ರ್ಯಾಗಿಂಗ್ ಒಳಗಾಗಿದ್ದ ಸಂತ್ರಸ್ತ ವಿದ್ಯಾರ್ಥಿನಿಗೆ ಚಿಕಿತ್ಸೆ ನೀಡಿದ ವೈದ್ಯರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ