ಬೆಂಗಳೂರು: ನಗರದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಹಾಗೂ ಮೋಡ ಕವಿದ ವಾತಾವರಣದಿಂದಾಗಿ ಮುಂದಿನ ಒಂದು ವಾರ ಚಳಿಯಿಂದ ಕೂಡಿದ ವಾತಾವರಣವಿರಲಿದೆ.
ಹವಾಮಾನ ಇಲಾಖೆಯ ಪ್ರಕಾರ ಇನ್ನೂ ಒಂದು ವಾರ ನಗರದಲ್ಲಿ ಮೋಡದ ಕವಿದ ವಾತಾವರಣವಿದ್ದು, ಆಗಾಗ್ಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ, ಜುಲೈ 1 ರವರೆಗೆ ಗರಿಷ್ಠ ಉಷ್ಣಾಂಶ 28 ಡಿಗ್ರಿ ಇದ್ದು,ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಳೆಯಿಂದಾಗಿ ನಗರದಲ್ಲಿ ಯಾವುದೇ ದೂರು ದಾಖಲಾಗಿಲ್ಲ, ಮಳೆಯಿಂದ ಕೆಲವೆಡೆ ಟ್ರಾಫಿಕ್ ಜಾಮ್ ಆಗಿದ್ದ ವರದಿಯಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.